..
kruti by ಲಕ್ಷ್ಮೀನಾರಯಣರಾಯರು Lakshminarayanaru
ಆರತಿಯನು ಎತ್ತಿರಮ್ಮ ವರ ಮಹಾಲಕ್ಷುಮಿಗೆ
ಚಾರುಮತಿಗೆ ವರವನಿತ್ತಪಾರ ಕರುಣಾಂಬುಧಿಗೆ ಪ
ಶ್ರಾವಣ ಶುಕ್ರವಾರದಲಿ ಸಾವಧಾನ ಮನದಿ ನಿತ್ಯ
ಸೇವಿಸುವರಿಗೊಲಿದು ಭಾಗ್ಯವೀವ ಮಹಾಲಕ್ಷುಮಿಗೆ 1
ಹೆತ್ತತಾಯಿ ತನ್ನ ಶಿಶುವನರ್ಥಿಯಿಂದ ಸಲಹುವಂತೆ
ಭೃತ್ಯವರ್ಗವನ್ನು ಪೊರೆದು ನಿತ್ಯಲೋಕ ಮಾತೆಗೀಗ 2
ಚಿಂತಿತಾರ್ಥನೀವ ಲಕ್ಷ್ಮೀಕಾಂತನುರ ಸ್ಥಳದಿ ನಿಂತು
ದಂತಿವರದನನಂತ ಗುಣಗಳನಂತಗಾಣದಿರುವಳಿಗೆ 3
***