Showing posts with label ಆವ ಕರ್ಮವೊ ಇದು ಆವ ಧರ್ಮವೊಆವ ಕರ್ಮವೆಂದರಿಯೆ. Show all posts
Showing posts with label ಆವ ಕರ್ಮವೊ ಇದು ಆವ ಧರ್ಮವೊಆವ ಕರ್ಮವೆಂದರಿಯೆ. Show all posts

Wednesday, 1 September 2021

ಆವ ಕರ್ಮವೊ ಇದು ಆವ ಧರ್ಮವೊಆವ ಕರ್ಮವೆಂದರಿಯೆ, ಹಾರುವರಿವರು ಬಲ್ಲರೆ ankita neleyadikeshava

 ..

ಆವ ಕರ್ಮವೊ ಇದು ಆವ ಧರ್ಮವೊಆವ ಕರ್ಮವೆಂದರಿಯೆ, ಹಾರುವರಿವರು ಬಲ್ಲರೆ ಪ


ಸತ್ತವನು ಎತ್ತ ಪೋದಸತ್ತು ತನ್ನ ಜನ್ಮಕೆ ಪೋದಸತ್ತವನು ಉಣ್ಣುವನೆಂದುನಿತ್ಯ ಪಿಂಡವಿಕ್ಕುತೀರಿ1


ಎಳ್ಳು ದರ್ಭೆ ಕೈಲಿ ಪಿಡಿದುಪಿತರ ತೃಪ್ತಿ ಪಡಿಸುತೀರಿಎಳ್ಳು ಮೀನು ನುಂಗಿ ಹೋಯಿತುದರ್ಭೆ ನೀರೊಳು ಹರಿದು ಹೋಯಿತು 2


ಎಡಕೆ ಒಂದು ಬಲಕೆ ಒಂದುಎಡಕೆ ತೋರಿಸಿ ಬಲಕೆ ತೋರಿಸಿಕಡು ಧಾವಂತ ಪಡಿಸಿಕಟಿಯ ಹಸ್ತದೊಳಗೆ ಪಿಡಿಸುತೀರಿ 3


ಮಂತ್ರಾಕ್ಷತೆಯ ಕೈಗೆ ಕೊಟ್ಟುಮೋಕ್ಷವನ್ನು ಹಾರೈಸುವಿರಿಮಂತ್ರವೆಲ್ಲೊ ಅಕ್ಷತೆಯೆಲ್ಲೊಮೋಕ್ಷವೆಲ್ಲೊ ಮತ್ರ್ಯವೆಲ್ಲೊ4


ಹೇಳುವವನು ಅವಿವೇಕಿಕೇಳುವವನು ಅಜ್ಞಾನಿಹೇಳುವ ಕೇಳುವ ಇಬ್ಬರ ಸೊಲ್ಲಆದಿಕೇಶವಮೂರ್ತಿ ಬಲ್ಲ5

***