Showing posts with label ಆವ ಪರಿಯಲಿ ನಿನ್ನನು ವೊಲಿಸುವೆ vijaya vittala. Show all posts
Showing posts with label ಆವ ಪರಿಯಲಿ ನಿನ್ನನು ವೊಲಿಸುವೆ vijaya vittala. Show all posts

Thursday, 17 October 2019

ಆವ ಪರಿಯಲಿ ನಿನ್ನನು ವೊಲಿಸುವೆ ankita vijaya vittala

ವಿಜಯದಾಸ
ಆವಪರಿಯಲಿ ನಿನ್ನನು ವೊಲಿಸುವೆ
ದೇವ ಎನ್ನೊಳಗೆ ಒಂದಾದರೂ ಗುಣವಿಲ್ಲಾ ಪ
ಅರಿಯೆ ಧರ್ಮವ ಪಾಪ | ಮರಿಯೆ ಉತ್ತಮರನ್ನ
ಕರಿಯೆ ನಾಮಕೆ ಬಾಯಿ | ತೆರಿಯೆ ಸುರಿಯೆ
ಜರಿಯೆ ಮೋºಕೆ ಮನ | ಮುರಿಯೆ ವ್ಯಾಕುಲ ಜ್ಞಾನಾಂ |
ಕುರಿಯ ನಿನ್ನವರೊಳು | ಬೆರಿಯೆನರಿಯೆ
ಸರಿಯೆ ದುಸ್ಸಂಗ ಕಥಾ | ಬರಿಯೆ ಕರದಿ ಯಾತ್ರಿಗೆ
ಹರಿಯೆ ಪುಣ್ಯ ತೀರ್ಥ | ವರಿಯೆ ಮೊರಿಯೆ
ಹರಿಯೆ ಜಗದೊರೆಯೆ | ಸಿರಿದೊರೆಯೆ ಅಘ
ಕರಿಗೆ ಕೇಸರಿಯೆ ಮತ್ತಾ | ರರಿಯೆ ನಿನ್ನವರ ಮರಿಯೆ1

ನಡಿಯೆ ಸುಮಾರ್ಗ ವ್ರತವಿಡಿಯೆ ಮುಡಿದ ಪೂವು
ಮುಡಿಯೆ ಕಾಮದ ಮರ್ಮ | ತಡಿಯೆ ಕಡಿಯೇ
ಕುಡಿಯೆ ಪಾಪೋದಕವ ನುಡಿಯೆ ಮಂಗಳ ವಾರ್ತಿ
ಪಿಡಿಯೆ ಭಕುತಿ ನೀತಿ ಪಿಡಿಯೆ ಗುಡಿಯೇ
ಸುಕೃತಿ ಕಾಳ | ಗೆಡಿಯೆ ಪರರೊಸ್ತಕ್ಕೆ
ತೊಡಿಯೆ ಚಿಂತಾತುರವ | ವುಧಿಯೆ ಹೊಡಿಯೆ
ಕೊಡಿಯೆ ಎನ್ನಗೊಡಿಯೆ ನೆಂ | ದೆಡೆಯಲ್ಲಿ ಸೂಸಿದಾ
ಪುಡಿಯಲ್ಲಿ ವೊಡಬೆರಸೆ | ಅಡಿಗಡಿಗೆ ಎನ್ನ ಕಡಿಗೆ 2

ಸುಳಿಯೆ ಕೀರ್ತನಿಗೆ ಮದ | ವಳಿಯೆ ಗುರುನಿಂದಕರ
ಹಳಿಯೆ ಕಾಮದ ಕುಪ್ಪೆ | ಕಳಿಯೆ ಬಳಿಯೆ
ತೊಳಿಯೆ ಮನನ ನರಕಕ್ಕೆ | ಮುಳಿಯೆ ಸುಮತಿಮಾರ್ಗ
ತಿಳಿಯೆ ಪದವಿಗೆ ಪೋಗಿ | ಇಳಿಯೆ ಬೆಳಿಯೆ
ಛಳಿಯೆ ಮುಂದಿನ ಜನನ | ಹೊಳೆಯೆಂಬೋದು ಅರಿದು
ಸಂಚಿತ ಕರ್ಮ | ವಳಿಯೆ ತುಳಿಯೆ
ವುಳಿಯೆ ಬೊಬ್ಬುಳಿಯೆ ಈ | ಕಳೆಯೇನುವಲ್ಲನಭ
ಸುಳಿ ಹೃದಯಾವಳಿಯಲ್ಲಿ | ವಿಜಯವಿಠ್ಠಲವೊಳಿಯೆ3
**********