Showing posts with label ಆವ ಪರಿಯಿಂದಲಾದರೂ ರಾಮನಾಮವನು devapura lakshmikanta. Show all posts
Showing posts with label ಆವ ಪರಿಯಿಂದಲಾದರೂ ರಾಮನಾಮವನು devapura lakshmikanta. Show all posts

Monday, 2 August 2021

ಆವ ಪರಿಯಿಂದಲಾದರೂ ರಾಮನಾಮವನು ankita devapura lakshmikanta

ಆವಪರಿಯಿಂದಲಾದರೂ ರಾಮನಾಮವನು

ಆವ ಪರಿಯಲಿ ನೆನೆದು ಸುಖಿಯಾಗು ಮನವೆ ಪ


ಪಿತನಾಜ್ಞೆ ಲಕ್ಷಿಸದೆ ದೃಢದಿ ಪ್ರಹ್ಲಾದನು

ಅತಿಶಯದಿ ಹರಿಯ ಧ್ಯಾನವ ಮರೆಯದೆ

ಮತಿಗೇಡಿಯಾದ ಮಗನೆನುತ ಕುಲಗೆಡಿಸೆ ಶ್ರೀ

ಪತಿಯು ತಾ ಬಂದು ಕಾಯ್ದುದೇ ಸಾಕ್ಷಿ 1


ದೋಷಹಿತನಾದ ದಶಶಿರನ ಒಡಹುಟ್ಟಿ

ಕೇಶವನ ಧ್ಯಾನವನು ಮರೆಯದಿರಲು

ಸಾಸಿರ ರಾಮಕಥೆಯುಳ್ಳನಕಾ ವಿ-

ಭೀಷಣಗೆ ಸಾಮ್ರಾಜ್ಯವಿತ್ತುದೇ ಸಾಕ್ಷಿ 2


ಗಂಡರೈವರು ಸುತ್ತ ಕೆಲದಲಿರಲಾ ಸತಿಯ

ಲಂಡ ದುಶ್ಶಾಸನ ಹಿಡಿದೆಳೆಯುತಿರಲು

ಪುಂಡರೀಕಾಂಬಕನೆ ಸಲಹೆನಲು ಕರೆಯಲು

ದ್ದಂಡನಾಭನೆ ಬಂದು ಕಾಯ್ದುದೇ ಸಾಕ್ಷಿ 3


ಯುದ್ಧಕೆ ನಡೆದಾಗ ಹಂಸಧ್ವಜಸುತನು ತನ್ನ ಬೇ

ಕಾದ ಸತಿಯ ಆಜ್ಞೆಯ ನಡೆಸಲು ಪಿತನು

ಕಾದೆಣ್ಣೆ ಕೊಪ್ಪರಿಗೆಯೊಳಗೆ ಸುಧನ್ವನ ಹಾಕೆ ಹರಿ

ಕಾಯ್ದನೆಂಬುದ ಲೋಕವರಿದುದೆ ಸಾಕ್ಷಿ 4


ಉರ್ವಿಯೊಳು ವಿಪ್ರಜನ್ಮದಿ ಜನಿಸಿದಜಮಿಳಗೆ

ಪೂರ್ವಸಂಚಿತ ಪಾಪಶೇಷವಿರಲು

ಓರ್ವ ಸತಿಗಾಗಿ ಚಂಡಾಲತಿಯೊಳಗಾಗಿರೆ

ಗೀರ್ವಾಣಪುರಿ ಲಕ್ಷ್ಮೀಶನೊಲಿದುದೇ ಸಾಕ್ಷಿ 5

****