Showing posts with label ಆವ ಬಗೆಯಿಂದ ಸಲಿಗೆಯನಿತ್ತಿಯೊ vijaya vittala. Show all posts
Showing posts with label ಆವ ಬಗೆಯಿಂದ ಸಲಿಗೆಯನಿತ್ತಿಯೊ vijaya vittala. Show all posts

Thursday, 17 October 2019

ಆವ ಬಗೆಯಿಂದ ಸಲಿಗೆಯನಿತ್ತಿಯೊ ankita vijaya vittala

ವಿಜಯದಾಸ
ಆವ ಬಗೆಯಿಂದ ಸಲಿಗೆಯನಿತ್ತಿಯೊ
ಮಾವಮರ್ದನ ರಂಗ ನಿನ್ನ ದಯಾ ತಿಳಿಯದು ಪ

ಅಂದರೆ ಆನಂದ ಅನಂದದೇ ಅನಾನಂದ
ನಿಂದದೆ ಗೋಕುಲ ನಿಲದದೆ ವ್ಯಾಕುಲ
ಬಂದದೆ ಪುರುಷಾರ್ಥ ಬಾರದಿದ್ದರೆ ವ್ಯರ್ಥ
ಮಂಧರಧರ ನಿನ್ನ ಮನಸು ಬಂದದ್ದೆ ಸರಿ 1

ಕೊಟ್ಟದ್ದೆ ಪುರುಷಾರ್ಥ ಕೊಡದಿಪ್ಪದೆ ಅನರ್ಥ
ಅಟ್ಟಿ ಬರುವ ಪಾಪ ಸುಟ್ಟು ಬಿಡು ನಿರ್ಲೇಪ
ತಟ್ಟಿದುದೆ ವೇದಾರ್ಥ (ತಟ್ಟದದೆ) ಮಿಥ್ಯ
ವಿಠ್ಠಲ ನಿನ್ನ ಭಕ್ತರಿಗೆ ನೀ ಬಲು ಸುಲಭಾ 2

ದೆರಗಲು ಆಕ್ಷಣವೆ ಸಿದ್ಧ ಮಾಳ್ಪೆ
ಕರುಣ ನಿಧಿಯೆ ನಮ್ಮ ವಿಜಯವಿಠ್ಠಲ ನಿನ್ನ
ಸರಿಯಾದ ದೇವರನು ಕಾಣೆ ತ್ರಿಭುವನದಲ್ಲಿ3
**********