Showing posts with label ಆವುದೊಳ್ಳೆಯದೊ ನಿನ್ನಂಗ ಚೆಲುವದೇವ ಬಂಕಾಪುರದ ಲಕುಮಿ ನರಸಿಂಗ neleyadikeshava. Show all posts
Showing posts with label ಆವುದೊಳ್ಳೆಯದೊ ನಿನ್ನಂಗ ಚೆಲುವದೇವ ಬಂಕಾಪುರದ ಲಕುಮಿ ನರಸಿಂಗ neleyadikeshava. Show all posts

Wednesday, 1 September 2021

ಆವುದೊಳ್ಳೆಯದೊ ನಿನ್ನಂಗ ಚೆಲುವದೇವ ಬಂಕಾಪುರದ ಲಕುಮಿ ನರಸಿಂಗ ankita neleyadikeshava

 ..

ಆವುದೊಳ್ಳೆಯದೊ ನಿನ್ನಂಗ - ಚೆಲುವದೇವ ಬಂಕಾಪುರದ ಲಕುಮಿ ನರಸಿಂಗ ಪ


ಜಗದೊಳಗೆ ತಾನು ತಂದೆಯ ಮಾತು ಕೇಳದಾಮಗನು ಇಹ ಪರಕೆ ಸಲುವ ಪ್ರಾಜ್ಞನೆ ?ಬಗೆಗೊಳಿಸಿ ಪ್ರಹ್ಲಾದ ಪಿತನೊಡಲ ನಿನ್ನ ಕೂ-ರುಗುರಿನಿಂ ಬಗೆಸಿದಾತಂಗೆ ಮುಕುತಿಯನೀವೆ 1


ಪೊಡವಿಯೊಳು ಅಣ್ಣನಾಜ್ಞೆಯ ಮೀರಿ ನಡೆಯುತಿಹಒಡಹುಟ್ಟಿದವಗೆ ಕೈವಲ್ಯವುಂಟೆ ?ದೃಢದಲಿ ವಿಭೀಷಣಾಗ್ರಜನನ್ನು ಬಾಣದಲಿಕೆಡಹಿಸಿದ ಬಳಿಕವಗೆ ಸ್ಥಿರಪಟ್ಟ ಕಟ್ಟಿದೆ2


ರೂಢಿಯಲಿ ಗುರುದ್ರೋಹವನು ಮಾಡಿದವನ ಮೊಗನೋಡಿದಾಗಲೆ ಪ್ರಾಯಶ್ಚಿತ್ತವುಂಟುನೋಡಿದಾಗಲೆ ಬೃಹಸ್ಪತಿಸತಿಗೆ ಅಳುಪಿದನಸೂಡಿದಾತನ ಸ್ನೇಹವನು ಮಾಡಿಕೊಂಡಿರ್ಪೆ 3


ದೇಶದೊಳು ವಂಶಕಂಟಕರೆನಿಸಿದವರೊಳಗೆಭಾಷಣವ ಮಾಡಬಪ್ಪುದೆ ಪ್ರಾಜ್ಞರು ?ಬೇಸರಿಸದೆ ಕೌರವರ ಕೊಂದ ಪಾಂಡವರ ಸಂ-ತೋಷದಲಿ ಪಕ್ಷಿಕರ ಮಾಡಿಕೊಂಡಿರ್ಪೆ 4


ಪೊಡವಿಪತಿ ಕೇಳು ಶ್ರೀ ಆದಿಕೇಶವನೆ ಹಿಂ-ಗಡೆಯಲ್ಲಿ ಮನೆಯ ಕಟ್ಟಿಸಬಾರದೆ ?ಬಿಡೆಯವಿಲ್ಲದೆ ಸಭಾಮಧ್ಯದಲಿ ಹೆಂಡತಿಯತೊಡೆಯ ಮೇಲ್ಕುಳ್ಳಿರಿಸಿಕೊಂಡಿರ್ಪ ಹಿರಿಯತನ 5

***