Showing posts with label ಆವೇಳೆಯಲಿ ಆರಾರ ಕಾಯ್ದೆಯೊ ದೇವಈ ವೇಳೆಯಲಿ ಎನ್ನ ಕಾಯ್ದರದು ನಿಜವಹುದು ankita neleyadikeshava. Show all posts
Showing posts with label ಆವೇಳೆಯಲಿ ಆರಾರ ಕಾಯ್ದೆಯೊ ದೇವಈ ವೇಳೆಯಲಿ ಎನ್ನ ಕಾಯ್ದರದು ನಿಜವಹುದು ankita neleyadikeshava. Show all posts

Wednesday, 1 September 2021

ಆವೇಳೆಯಲಿ ಆರಾರ ಕಾಯ್ದೆಯೊ ದೇವಈ ವೇಳೆಯಲಿ ಎನ್ನ ಕಾಯ್ದರದು ನಿಜವಹುದು ankita neleyadikeshava

 ..

ಆ ವೇಳೆಯಲಿ ಆರಾರ ಕಾಯ್ದೆಯೊ ದೇವಈ ವೇಳೆಯಲಿ ಎನ್ನ ಕಾಯ್ದರದು ನಿಜವಹುದು ಪ

ಕರೆಯೆ ಕಂಬದಿ ಬಂದು ಹಿರಣ್ಯಕಶಿಪುವ ಕೊಂದೆಶರಣನನು ಪಾಲಿಸುತೆ ಕಾಯ್ದೆಯಂತೆಕರಿರಾಜ ಹರಿಯೆಂದು ಕರೆಯಲಾಕ್ಷಣ ಬಂದುಕರುಣದಿಂದಲಿ ಕಾಯ್ದೆಯಂತೆ ಹರಿಯೆ 1

ಧರೆಗಧಿಕನಾಥನಾ ತೊಡೆಯನೇರಲು ಕಂಡುಜರೆಯಲಾ ಧ್ರುವನ ನೀ ಕಾಯ್ದೆಯಂತೆದುರುಳ ದುಃಶಾಸನ ದ್ರೌಪದಿಯ ಸೀರೆಯ ಸೆಳೆಯೆತರುಣಿಗಕ್ಷಯವಿತ್ತು ಕಾಯ್ದೆಯಂತೆ ಹರಿಯೆ 2

ಅಂದು ರಾವಣ ವಿಭೀಷಣನ ನೂಕಲು ಕಂಡುಇಂದಿರಾರಮಣ ನೀ ಕಾಯ್ದೆಯಂತೆಮಂದರೋದ್ಧರ ಮಧುಸೂದನ ಮಾಧವ ಗೋ-ವಿಂದ ರಕ್ಷಿಸು ಬಾಡದಾದಿಕೇಶವರಾಯ 3

***