Showing posts with label ಇಂಥಾವಗ್ಹ್ಯಾಂಗೆ ಮನಸೋತೆ ಬಲು ankita helavana katte INTHAVAGYANGA MANASOTE. Show all posts
Showing posts with label ಇಂಥಾವಗ್ಹ್ಯಾಂಗೆ ಮನಸೋತೆ ಬಲು ankita helavana katte INTHAVAGYANGA MANASOTE. Show all posts

Friday, 27 December 2019

ಇಂಥಾವಗ್ಹ್ಯಾಂಗೆ ಮನಸೋತೆ ಬಲು ankita helavana katte INTHAVAGYANGA MANASOTE


 





ಇಂಥಾವಗ್ಹ್ಯಾಂಗೆ ಮನಸೋತೆ ಬಲು
ಪಂಥವಾಡಿದ ಜಗನ್ಮಾತೆ ಪ.

ಆವಾಗ ನಾರುವ ಮೈಯ್ಯ ಬಿಚ್ಚಿ
ತೋರಿ ನಲಿಯುವ ಕಾಲು ಕೈಯ್ಯ
ಕೋರೆಯ ಮಸೆಯುತ ಕೊಸರಿಕೊಂಡಸುರನ
ಕರುಳನು ಬಗೆದಂಥ ಅದ್ಭುತ ಮಹಿಮಗೆ 1

ಬಡಬ್ರಾಹ್ಮಣನಾಗಿ ತಿರಿದ ತನ್ನ
ಹಡೆದ ತಾಯಿಯ ಶಿರವರಿದ
ಮಡದಿಗಾಗಿ ದೊಡ್ಡಡವಿಯೊಳ್ಮನೆ ಕಟ್ಟಿ
ಬಿಡದೆ ಸ್ತ್ರೀಯರ ಗೋಕುಲದಲ್ಲಿ ಮೆರೆದ 2

ಬತ್ತಲೆ ನಿಂತಿದ್ದನೀಗ ತೇಜಿ
ಹತ್ತಿ ಮೆರೆವದೊಂದು ಯೋಗ
ಉತ್ತಮ ಹೆಳವನಕಟ್ಟೆ ಶ್ರೀರಂಗ
ಭಕ್ತವತ್ಸಲ ಸ್ವಾಮಿ ದೇವಕೃಪಾಂಗ 3
*****

ಇಂಥಾವಗ್ಹ್ಯಾಂಗೆ ಮನಸೋತೆ ಬಲು
ಪಂಥವಾಡಿದ ಜಗನ್ಮಾತೆ ಪ.

ಆವಾಗ ನಾರುವ ಮೈಯ್ಯ ಬಿಚ್ಚಿ
ತೋರಿ ನಲಿಯುವ ಕಾಲು ಕೈಯ್ಯ
ಕೋರೆಯ ಮಸೆಯುತ ಕೊಸರಿಕೊಂಡಸುರನ
ಕರುಳನು ಬಗೆದಂಥ ಅದ್ಭುತ ಮಹಿಮಗೆ 1

ಬಡಬ್ರಾಹ್ಮಣನಾಗಿ ತಿರಿದ ತನ್ನ
ಹಡೆದ ತಾಯಿಯ ಶಿರವರಿದ
ಮಡದಿಗಾಗಿ ದೊಡ್ಡಡವಿಯೊಳ್ಮನೆ ಕಟ್ಟಿ
ಬಿಡದೆ ಸ್ತ್ರೀಯರ ಗೋಕುಲದಲ್ಲಿ ಮೆರೆದ 2

ಬತ್ತಲೆ ನಿಂತಿದ್ದನೀಗ ತೇಜಿ
ಹತ್ತಿ ಮೆರೆವದೊಂದು ಯೋಗ
ಉತ್ತಮ ಹೆಳವನಕಟ್ಟೆ ಶ್ರೀರಂಗ
ಭಕ್ತವತ್ಸಲ ಸ್ವಾಮಿ ದೇವಕೃಪಾಂಗ 3
******