Showing posts with label ಇಂದು ನಮ್ಮ ಮನಿಲ್ಯಾನಂದೋಬ್ರಹ್ಮಾ ತಂದೆ ಸದ್ಗುರು mahipati. Show all posts
Showing posts with label ಇಂದು ನಮ್ಮ ಮನಿಲ್ಯಾನಂದೋಬ್ರಹ್ಮಾ ತಂದೆ ಸದ್ಗುರು mahipati. Show all posts

Wednesday, 1 September 2021

ಇಂದು ನಮ್ಮ ಮನಿಲ್ಯಾನಂದೋಬ್ರಹ್ಮಾ ತಂದೆ ಸದ್ಗುರು ankita mahipati

ಕೃತಿ ಕಾಖಂಡಕಿ ಶ್ರೀ ಮಹಿಪತಿರಾಯರು

 ಇಂದು ನಮ್ಮ ಮನಿಲ್ಯಾನಂದೋಬ್ರಹ್ಮಾ ತಂದೆ ಸದ್ಗುರು ದಯ ಏನೆಂದ್ಹೇಳಲಿ ಸಂಭ್ರಮ P

ಹರುಷ ತುಂಬೇದ ಬಹಳ ತೆರವಿಲ್ಲೆಳ್ಳಷ್ಟು ಸ್ಥಳ ಸಿರಿಯನಾಳ್ವ ದಯಾಳ ಹರಿ ಬಂದಾನೆ ಕೃಪಾಳ 1 

ಸೂಸುತಲಿ ಸಂತೋಷ ಪಸರಿಸ್ಯದ ಉಲ್ಹಾಸ ಭಾಸುತಾನೆ ಸರ್ವೇಶ ಭಾಸ್ಕರ ಕೋಟಿ ಪ್ರಕಾಶ 2 

ಪ್ರಾಣಕಾಗೇದ ಪ್ರಸ್ತ ಮನಕಾಗೇದ ತಾಂ ಸ್ವಸ್ತ ಸಅನುಭವದ ಸುವಸ್ತ ಖೂನಾಗಿ ಬಂದು ಸಾಭ್ಯಸ್ತ 3 

ಹೇಳಲಿಕ್ಕಳವಲ್ಲ ಹೊಳವ ಸುಖದ ಸೊಲ್ಲ ತಿಳಿದ ಮಹಿಮೆ ಬಲ್ಲ ಸುಳವು ಸೂಕ್ಷ್ಮವೆಲ್ಲ 4 

ಕರ್ತುತಾಂ ದಯಮಾಡಿ ಅರ್ತು ಬಂದೊಡಮೂಡಿಆರ್ಥಿಯಿಂದೆವೆ ನೋಡಿ ಬೆರ್ತು ಮಹಿಪತಿಕೂಡಿ 5

***