Showing posts with label ಇಂದು ನಮ್ಮ ಸಲಹಯ್ಯಾ ಸಿರಿರಮಣಾ ದುರಿತ ನಿವಾರಿಸು gurumahipati. Show all posts
Showing posts with label ಇಂದು ನಮ್ಮ ಸಲಹಯ್ಯಾ ಸಿರಿರಮಣಾ ದುರಿತ ನಿವಾರಿಸು gurumahipati. Show all posts

Wednesday, 1 September 2021

ಇಂದು ನಮ್ಮ ಸಲಹಯ್ಯಾ ಸಿರಿರಮಣಾ ದುರಿತ ನಿವಾರಿಸು ankita gurumahipati

ಕೃತಿ ಕಾಖಂಡಕಿ ಕೃಷ್ಣದಾಸರು

ಇಂದು ನಮ್ಮ ಸಲಹಯ್ಯಾ ಸಿರಿರಮಣಾ| ದುರಿತ ನಿವಾರಿಸು ಪೂರ್ಣ| ಮಂದಮತಿಗಳಾ ನೋಡದೆವೆ ನ್ಯೂನಾ| ಛಂದದಿಂದ ಕೊಡು ನಿನ್ನ ಚರಣ ಧ್ಯಾನಾ ಪ 


ಹಿಂದ ವ್ಯಾಧನೊಬ್ಬ ಹರಿಣಿ ಹಿಡಿಯಲಿ| ನಿಂತು ಚತುರ್ವಿಧ ಬಲಿಯಾನೊಡ್ಡಿರಲಿ| ಮೃಗ ಮೊರೆಯಿಡಲಿ| ಬಂದು ಕರುಣಿಸಿ ರಕ್ಷಿಸಿದ ಪರಿಲಿ 1 
ಬಸಿರೊಳಗಿದ್ದ ಪರೀಕ್ಷಿತಗೆಂದು| ಎಸೆಯಲು ಬಾಣಗಳ ದ್ರೋಣಿ ಮುಳಿದು| ಬಿಸಜಾಕ್ಷ ನಿನ್ನ ಚಕ್ರ ಮರೆವಿಡಿದು| ಪರಿ ಬಂದು 2 
ದಿನ ವತ್ಸಲ ದಯಾನಿಧಿ ಎನುವಾ| ಖೂನದೋರಿಸಯ್ಯಾ ಬಿರುದಿನ ಅನುವಾ| ನಿನೇ ತಾಯಿ ತಂದೆ ಬಂಧು ಸಖದೈವ| ಘನಗುರು ಮಹಿಪತಿ ಸುಖ ಜೀವಾ 3
****