ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನಮ್ಮನಿಯಲಿ ಆನಂದ ಬಂದ ನೋಡಿ ಮುಕುಂದ ಗುರುಕೃಪೆಯಿಂದ P
ಸದಮಲ ಸುಖಕಲ್ಲೋಳ ಬೆಳಗುದೋರುತಲ್ಯದೆ ಬಹಳ ಹೇಳಲಳವಲ್ಲದು ಬಲುಸೂಕ್ಷ್ಮ ತಿಳಿದವ ತಾ ವಿರಳ ಇಳೆಯೊಳು ನಿಜ ಆನಂದವು ದೋರಿತು ಸ್ವಾನುಭವಕ ಸುಕಾಲ 1
ಮಾಯವಗಂಡು ಧನ್ಯಧನ್ಯಗೈಯಿತು ಜೀವನ ತಾ ಸನ್ಮತ ಸುಖಸವಿಗೊಂಡು ಪುಣ್ಯರಥ ಪರಿಣಾಮದಲನುದಿನ ಮನಬೆರೆಯಿತು ನೆಲೆಗೊಂಡು ಸ್ಮರಣಿಯ ಸವಿದುಂಡು 2
ಸದ್ಗುರು ಎನ್ನೊಡೆಯ ಚಂದವಾಯಿತು ಆನಂದದ ಸುಖವಿದು ಮಹಿಪತಿಗೆಡೆಯಡಿಯ ಸಂದಹರೆವ ಜನ್ಮ ಮರಣದ ಹೇಳಿದ ತಾ ನಿಜನುಡಿಯ ಹೊಂದಿ ಹರುಷಬಡುವಾನಂದವುದೋರುತಿದೆ ಸಿಲುಕಡಿಯ 3
****