Showing posts with label ಇಕ್ಕೊ ಇಲ್ಲೆ ಸಿಕ್ಕಿದ ಶ್ರೀಗುರು ಪರಬ್ರಹ್ಮ ತೆಕ್ಕಿಸಿಕೊಂಬುವ ಬನ್ನಿ mahipati. Show all posts
Showing posts with label ಇಕ್ಕೊ ಇಲ್ಲೆ ಸಿಕ್ಕಿದ ಶ್ರೀಗುರು ಪರಬ್ರಹ್ಮ ತೆಕ್ಕಿಸಿಕೊಂಬುವ ಬನ್ನಿ mahipati. Show all posts

Wednesday, 1 September 2021

ಇಕ್ಕೊ ಇಲ್ಲೆ ಸಿಕ್ಕಿದ ಶ್ರೀಗುರು ಪರಬ್ರಹ್ಮ ತೆಕ್ಕಿಸಿಕೊಂಬುವ ಬನ್ನಿ ankita mahipati

ಕೃತಿ ಕಾಖಂಡಕಿ ಶ್ರೀ ಮಹಿಪತಿರಾಯರು

 

ಇಕ್ಕೊ ಇಲ್ಲೆ ಸಿಕ್ಕಿದ ಶ್ರೀಗುರು ಪರಬ್ರಹ್ಮ ತೆಕ್ಕಿಸಿಕೊಂಬುವ ಬನ್ನಿ ಅಖರದಿ ನಮ್ಮ P

ಎಂದಿಗೆ ಬಿಡಬಾರದಿನ್ನು ತಂದೆ ನಮ್ಮಪ್ಪನ ಹೊಂದಿ ಸುಖಿಯಾಗಬೇಕು ಭಕ್ತಪಾಲಿಪನ ವಂದಿಸಬೇಕಿಂದು ಸಹಸ್ರಳದಲಿಪ್ಪನ ಸಂದೇಹವಿಲ್ಲದೆ ನೋಡಿ ಸ್ವರ್ಗಕೆ ಸೋಪಾನ 1 

ಹರುಷವಾಯಿತು ಎನಗೆ ಧರೆಯೊಳಿಂದು ನೋಡಿ ಕರುಣಾಳು ಗುರುಮೂರ್ತಿಯ ಸ್ತುತಿಸ್ತವನ ಪಾಡಿ ಎರಡಿಲ್ಲದೆ ಶ್ರೀಚರಣ ವರಕೃಪೆಯ ಬೇಡಿ ಶಿರಸಾ ನಮಿಸಿದೆ ಗರ್ವಾಂಹಕಾರ ಈಡ್ಯಾಡಿ2

ಲೇಸುಲೇಸಾಯಿತು ನಮ್ಮ ವಾಸುದೇವನ ಕಂಡು ಭಾಸ್ಕರಕೋಟಿ ತೇಜನ ಸ್ಮರಣಿಯ ಸವಿಯುಂಡು ವಾಸನೆ ತೃಪ್ತ್ಯಾಯಿತು ಶ್ರೀಯೀಶನಾ ಮನಗಂಡು ದಾಸಮಹಿಪತಿಗಾನಂದವಾಯಿತು ಸದ್ಗತಿ ಸೂರೆಗೊಂಡು 3

***