Showing posts with label ಇಕ್ಕೊ ಇಲ್ಲೆ ಹಾನೆ ಅಖಂಡವಾಗಿ ಸದ್ಗುರು ನಮ್ಮ mahipati. Show all posts
Showing posts with label ಇಕ್ಕೊ ಇಲ್ಲೆ ಹಾನೆ ಅಖಂಡವಾಗಿ ಸದ್ಗುರು ನಮ್ಮ mahipati. Show all posts

Wednesday, 1 September 2021

ಇಕ್ಕೊ ಇಲ್ಲೆ ಹಾನೆ ಅಖಂಡವಾಗಿ ಸದ್ಗುರು ನಮ್ಮ ankita mahipati

ಕಾಖಂಡಕಿ ಶ್ರೀ ಮಹಿಪತಿರಾಯರು

ಇಕ್ಕೊ ಇಲ್ಲೆ ಹಾನೆ ಅಖಂಡವಾಗಿ ಸದ್ಗುರು ನಮ್ಮ
ಅಕ್ಕಿಸಿಕೋಬೇಕು ಗುಕ್ಕಿ ತನ್ನೊಳು ತಾ ಗುಹ್ಯವರ್ಮ P

ಹೇಳಬಾರದು ಇನ್ನೊಬ್ಬರಗೀ ಮಾತು ಬಹಳ ಗೂಢ
ತಿಳಿದ ಮಹಿಪನೀವಾ ಲಕ್ಷಕೋಟಿಗೆ ಒಬ್ಬ ಪ್ರೌಢ
ಒಳಗುಟ್ಟಿನ ಕೀಲು ತಿಳಿಯಲಿಕ್ಕೆ ಮಾಡಿ ಮನದೃಢ
ಸುಳಹು ಕಂಡಮ್ಯಾಲೆ ಪ್ರಾಣಹೋದರೆ ಒಬ್ಬನು ಬಿಡಾ 1

ದೂರಿಲ್ಲ ದೂರಿಲ್ಲ ತಿಳಿಕೊಳ್ಳಿ ಪೂರ್ಣ ಅರಿತು ಬ್ಯಾಗ
ತಿರುಗಿನೋಡಲು ತನ್ನೊಳು ದೋರುತಿದೆ ಬ್ರಹ್ಮಯೋಗ
ಸಾರವೇ ಸುಖಗರವುತದೆ ನೋಡಿರೋ ರಾಜಯೋಗ
ಪರದೆ ಇಲ್ಲದೆ ಗುರುತದೋರುವಾ ನೋಡಿ ಕಣ್ಣಾರೆ ಈಗ 2

ಗುರುಕೃಪೆಯಿಂದ ಗುರುತಕ ದೂರಿಲ್ಲ ಕೊಳ್ಳಿ ಖೂನ
ಒಳಹೊರಗೆ ತುಂಬಿತುಳುಕುತದೆ ತಾನೆ ನಿಧಾನ
ತರಳ ಮಹಿಪತಿ ಸ್ವಾಮಿ ನೋಡಲಿಕ್ಕೆದ ಒಂದೆ ಸಾಧನ
ಸ್ವರೂಪರಿಯಲಿಕ್ಕೆ ಆಗುತ್ತದೆ ಬಲುಬ್ಯಾಗಲುನ್ಮನ 3

***