Showing posts with label ಇಟ್ಹಾಂಗಿರಬೇಕು ಮಾಂ ಇಟ್ಹಾಂಗಿರಬೇಕು ಸೃಷ್ಟೀಶ mahipati. Show all posts
Showing posts with label ಇಟ್ಹಾಂಗಿರಬೇಕು ಮಾಂ ಇಟ್ಹಾಂಗಿರಬೇಕು ಸೃಷ್ಟೀಶ mahipati. Show all posts

Wednesday, 1 September 2021

ಇಟ್ಹಾಂಗಿರಬೇಕು ಮಾಂ ಇಟ್ಹಾಂಗಿರಬೇಕು ಸೃಷ್ಟೀಶ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಇಟ್ಹಾಂಗಿರಬೇಕು ಮಾಂ ಇಟ್ಹಾಂಗಿರಬೇಕು ಸೃಷ್ಟೀಶ ನಮ್ಮ P 
ಸಕಳವೆಲ್ಲ ಹರಿ ಸೂತ್ರವು ಇರಲಿಕ್ಕೆ | ವಿಕಳಿತಗೊಂಬುವದ್ಯಾಕೆ ಮಾಂ | ಅಖಿಳ ಭುವನಕೆಲ್ಲ ಸಾಕಿ ಸ - | ಹಕಾರ ನೊಬ್ಬ ಶ್ರೀಪತಿಯ ಮಾಂ | 1 
ಯಂತ್ರಜೀವ ತಂತ್ರ ಶಿವ ಇರಲಿಕ್ಕೆ ಸ್ವ | ತಂತ್ರವೆ ನಾನೆಂಬುದ್ಯಾತಕೆ ಮಾಂ | ಚಿತ್ರ ವಿಚಿತ್ರವು ದೋರುವ ಸೂತ್ರವು | ಕರ್ತು ಸದ್ಗುರು ಸುತಂತ್ರವು ಮಾಂ 2 
ಅಂತ್ರ ಬಾಹ್ಯ ವ್ಯಾಪಕನಾಗಿರಲಿಕ್ಕೆ | ತಂತ್ರ ಮಂತ್ರಗಳ್ಯಾತಕೆ ಮಾಂ | ಜಂತ್ರ ಮಾಡಿ ಜನ್ಮ ಮರಣದ ತಿರಿಹುವಾ | ಗಂತ್ರವು ಎಂದಿಗೆ ತಿಳಿಯದು ಮಾಂ 3 
ಇಟ್ಹಾಂಗ ಇರಬೇಕು ಕೊಟ್ಹಾಂಗ ಕೊಂಡಿನ್ನು | ತುಟ್ಟಿಲೆ ಮಿಸುಕದೆ ಗುಟ್ಟಿಲೆ ಮಾಂ | ಹೊಟ್ಟಿಗಾಗಿ ಅಷ್ಟು ಸಾಯಾಸ | ಬಟ್ಟರೆ ಸಾರುಸದೇ ಅಟ್ಟಿಸುವದು ಮಾಂ 4 
ಇಟ್ಹಾಂಗ ಇರೋ ಮಹಿಪತಿ ಸೃಷ್ಟಿಯೊಳಿನ್ನು | ಘಟ್ಟಿಗೊಂಡ ಗುರುಪಾದವು ಮಾಂ | ಮುಟ್ಟಿ ಮುದ್ರಿಸಿ ಕೃಪಾದೃಷ್ಟಿಲೆ ಹೊರೆವನು | ಕೊಟ್ಟು ನಿನಗೆ ಸ್ವಾನುಭವವು ಮಾಂ 5
***