Showing posts with label ಇದು ಏನು ಚರಿಯಾ ವೆಂಕಟರಾಯ ಇದು ಏನು ಚರಿಯಾ gurujagannatha vittala. Show all posts
Showing posts with label ಇದು ಏನು ಚರಿಯಾ ವೆಂಕಟರಾಯ ಇದು ಏನು ಚರಿಯಾ gurujagannatha vittala. Show all posts

Thursday, 2 December 2021

ಇದು ಏನು ಚರಿಯಾ ವೆಂಕಟರಾಯ ಇದು ಏನು ankita gurujagannatha vittala IDU ENU CHARIYA VENKATARAYA IDU ENU




ಇದು ಏನು ಚರಿಯಾ ವೆಂಕಟರಾಯ ಇದು ಏನು ಚರಿಯಾ ಪ 


ಇದು ಏನು ಚರಿಯಾ ಶ್ರೀಯದುಕುಲ ತಿಲಕನೆ ಸದನತ್ರಯವ ಬಿಟ್ಟು ಹುದುಗಿಕೊಂಡಿರುವುದು ಅ.ಪ 


ಕನಕಪರ್ವತದಲ್ಲಿ ದಿನದಿನ ಮಾಡುವ ಘನ ಪೂಜೆಯನೆ ನೀನೆನಿಸದಿರುವುದು 1 


ಪೊಂಬಣ್ಣಾಂಬರವುಟ್ಟು ಹೊಂಬಣ್ಣಾಂಬರವಿಟ್ಟು ಕಂಬೆಣ್ಣೆಯನೆ ಬಿಟ್ಟು ದಿಗಂಬರನಾಗಿದ್ದು 2


 ಬುತ್ತಿ ಮೊದಲಾದ ಉತ್ತಮನೈವೇದ್ಯ ಹೊತ್ತಿಗುಂಬೋದು ಬಿಟ್ಟು ತುತ್ತುಗಾಣದಿರುವೋದು 3 


ಭಾಗ್ಯವಂತನು ನೀನು ಭಾಗ್ಯರೂಪಳು ರಾಣಿ ಭಾಗ್ಯತನವ ಬಿಟ್ಟು ನಿರ್ಭಾಗ್ಯನಾಗಿರುವೋದು 4 


ದಾತಗುರುಜಗನ್ನಾಥ ವಿಠಲ ಜಗದಿ ನಾಥನಾಗದೆ ಅನಾಥನಾಗಿರುವೋದು 5

***