Showing posts with label ಇದೇ ಸಾಧಿಸಿನೋಡಿ ಮನ ಉನ್ಮನಮಾಡಿ ಘನಸುಖ mahipati. Show all posts
Showing posts with label ಇದೇ ಸಾಧಿಸಿನೋಡಿ ಮನ ಉನ್ಮನಮಾಡಿ ಘನಸುಖ mahipati. Show all posts

Thursday, 2 September 2021

ಇದೇ ಸಾಧಿಸಿನೋಡಿ ಮನ ಉನ್ಮನಮಾಡಿ ಘನಸುಖ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಇದೇ ಸಾಧಿಸಿನೋಡಿ ಮನ ಉನ್ಮನಮಾಡಿ ಘನಸುಖ ಭೇಧಿಸಿದರ ಭಾಸುತದೆ ತನ್ನೊಳು ತಾನೆ ಕೌತುಕP
ನೋಡಿ ನೋಡಿ ಖೂನ ಅರುಹು ಇಲ್ಲದೆ ಜನದೊಳು ಬರುದೆ ಹೇಳ್ಯಾಡುದೇನ ನಿರ್ವಿಕಲ್ಪನ ನಿಜನೆಲೆನಿಭವರಿತು ನೋಡಿ ಸ್ಥಾನ ಸರ್ವಸಾಕ್ಷಿ ಸರ್ವಾತೀತವೆಂಬ ವಸ್ತು ನೋಡಿ ಪೂರ್ಣ 1 
ಕಣ್ಣಿನ ಕೊನೆ ಮುಟ್ಟಿ ಕರಗಿ ಮನವು ನೋಡಿ ಪೂರ್ಣ ಬೊಧ ಸಣ್ಣ ದೊಡ್ಡವರೊಳಗಿದೆ ಒಂದು ಸಾರುತಿದೆ ವೇದ ಧನ್ಯ ಧನ್ಯಗೈಸುವ ನಿಜ ಪುಣ್ಯ ಗುರುಪಾದ ಚನ್ನಾಗ್ಯನುಭವದಿಂದ ನೋಡಲಿಕ್ಯಾಗದು ಸ್ವಾದ 2 
ಸುರಿಮಳಿಗರೆವುತಲ್ಯದೆ ಸ್ವಸುಖದಾನಂದೊ ಬ್ರಹ್ಮ ತೆರೆತಿಳಿಯಲಿಕ್ಕೆ ಗುರು ಶರಣ ಹೋಗಬೇಕು ಇದೇ ವರ್ಮ ಹರುಷಗೈಸಿದ ನೋಡಿ ಪತಿತಪಾವನ ಸದ್ಗುರು ನಮ್ಮ ತರಳ ಮಹಿಪತಿಗಿದೆ ನಿತ್ಯಭಿನವದ ನೋಡಿ ಸಂಭ್ರಮ 3
***