Showing posts with label ಇದ್ದರಿರಬೇಕು ಸಂಸಾರಸುಖದಲ್ಹೀಗೆ ಪದ್ಮಪತ್ರವು mahipati. Show all posts
Showing posts with label ಇದ್ದರಿರಬೇಕು ಸಂಸಾರಸುಖದಲ್ಹೀಗೆ ಪದ್ಮಪತ್ರವು mahipati. Show all posts

Thursday, 2 September 2021

ಇದ್ದರಿರಬೇಕು ಸಂಸಾರಸುಖದಲ್ಹೀಗೆ ಪದ್ಮಪತ್ರವು ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಇದ್ದರಿರಬೇಕು ಸಂಸಾರಸುಖದಲ್ಹೀಗೆ ಪದ್ಮಪತ್ರವು ಜಲದೊಳಗಿದ್ಹಾಂಗೆ P

 ನಡಿನಡಿಯಬೇಕ್ಹೀಂಗೆ ತಡಿಯೊಳರಿಬಿಡದ್ಹಾಂಗೆ ನುಡಿನುಡಿಯಬೇಕು ಹರಿನುಡಿಸಿದ್ಹಾಂಗೆ ಪಡೆದರಿದೇ ಪಡಿಯಬೇಕು ಹರಿ ಒಡಲ ಹುಗುವ್ಹಾಂಗೆ ಅಡಿಗಡಿಗೆ ಹರಿಕೂಡಿ ಬಿಡದಗ್ಹಲದ್ಹಾಂಗೆ 1 
ಇಡಗಿ ಇಡಬೇಕ್ಹಿಂಗೆ ಇಡಗರಿಗುಡಿಸಿದ್ಹಾಂಗೆ ತುಡಗಿ ತುಡಬೇಕ್ಹೀಂಗೆ ತುಡಮಾಡಿಸದ್ಹಾಂಗೆ ಉಡಗಿ ಉಡಬೇಕ್ಹೀಂಗೆ ಉಡಿಗರಿಗುಡಿಸಿದ್ಹಾಂಗೆ ಮುಡಗಿ ಮುಡಿಬೇಕ್ಹಾಂಗ್ಹರಿಗೆ ಮುಡಿಸಿದ್ಹಾಂಗೆ 2 
ಉಂಡರುಣಬೇಕ್ಹೀಂಗೆ ಉಂಡದರಿಗುಣಸಿದ್ಹಾಂಗೆ ಕೊಂಡುದಕೋ ಹರಿಗೆ ಕೊಡಿಸಿದ್ಹಾಂಗೆ ಮಂಡಣಿಯ ಮಾಡ್ಹೀಂಗೆ ಹರಿಗೆ ಮಂಡಿಸಿದ್ಹಾಂಗೆ ಕೊಂಡು ಕೊಂಬುದು ಹರಿಕಂಡು ಒಲುವ್ಹಾಂಗೆ 3 
ಮಲಗಿ ಏಳುವದ್ಹೀಂಗೆ ಮಲಗರಿಗೇಳಿಸಿದ್ಹಾಂಗೆ ತಿಳವು ತಿಳವದು ಹರಿ ತಿಳಿಸಿದ್ಹಾಂಗೆ ಸುಳವು ಸುಳವರು ಹರಿಸುಳಸ್ಯಾಡಿದ್ಹಾಂಗೆ ಒಲವು ಮಾಡುವದ್ಹೀಂಗೆ ಹರಿಯ ಒಲಿವಾದ್ಹಾಂಗೆ 4 
ರತಿಪಿಡಿದು ಹೀಂಗೆ ಹರಿಗತಿಯಾಗುವ್ಹಾಂಗೆ ಅತಿಹರುಷ ಬಡು ಹರಿನೋಡುವ್ಹಾಂಗೆ ಸಥಿಯ ಪಡೆದವುದು ಹೀಂಗರಿಯು ಸಥಿನಡಿಸಿದ್ಹಾಂಗೆಸ್ತುತಿಮಾಡುವ ಮಹಿಪತಿ ಪ್ರತಿಗಾಣದ್ಹಾಂಗೆ 5
***