Showing posts with label ಇದ್ದರೇನು ಇಲ್ಲದಿದ್ದರೇನು ಬುದ್ಧಿಯಿಲ್ಲದವನು hanumesha vittala. Show all posts
Showing posts with label ಇದ್ದರೇನು ಇಲ್ಲದಿದ್ದರೇನು ಬುದ್ಧಿಯಿಲ್ಲದವನು hanumesha vittala. Show all posts

Tuesday, 1 June 2021

ಇದ್ದರೇನು ಇಲ್ಲದಿದ್ದರೇನು ಬುದ್ಧಿಯಿಲ್ಲದವನು ankita hanumesha vittala

 ಇದ್ದರೇನು ಇಲ್ಲದಿದ್ದರೇನು ಬುದ್ಧಿಯಿಲ್ಲದವನು ಬಾಳಿದ್ದರೇನು ಪ


ಮಕ್ಕಳಿಲ್ಲದ ಮನೆಯು ಅರಮನೆ ಆದರೇನು

ತಕ್ಕ ದಾನವ ಕೊಡದ ಧನವಿದ್ದರೇನು

ದುಃಖ ಸುಖಗಳನು ಕೇಳದ ನೆಂಟರಿದ್ದರೇನು

ಅಕ್ಕರದಿ ತಾನೊಬ್ಬ ಉಂಡರಾಗುವುದೇನು 1


ನರಜನ್ಮ ದೊರೆತಾಗ ಹರಿಯ ನೆನೆಯದಿರೇನು

ಪರಮ ಪಾತಕಿ ಆಗಿ ಬಾಳಿದ್ದರೇನು

ದುರಿತ ಕಾರ್ಯದೊಳಿದ್ದ ಬುದ್ಧಿಹಾಕಿದರೇನು

ಕರುಣರಹಿತನು ತಾನು ಅರಸಾದರೇನು 2

ಮಾತು ಕೇಳದ ಮಗನು ಮನೆಯಲ್ಲಿ ಇದ್ದರೇನು

ಸೋತು ನಡೆಯದ ಬಂಟತನವಿದ್ದರೇನು

ನೀತಿ ತಿಳಿಯದೆ ಹರಿಯ ಕಥೆಯ ಕೇಳಿದರೇನು

ಹೋತಿನ ಕೊರಳೊಳಗೆ ಮೊಲೆ ಇದ್ದರೇನು 3


ವೇದವನೋದದಾ ವಿಪ್ರನಾದರು ತಾನು

ದ್ವಾದಶಿ ನಾಮವನು ಬಡಕೊಂಡರೇನು

ಹಾದರಕೆ ಮೆಚ್ಚಿದಾ ಚಲ್ವೆ ಆದರೇನು

ಆದಿ ತಿಳಿಯದೆ ಬೂದಿ ಬಡಕೊಂಡರೇನು 4


ಶರಣು ಬಂದವರ ಅನ್ಯರಿಗೊಪ್ಪಿಸದೇ ತಾನು

ಕೊರಳ ಕೊಯಿದವನ ಧನ ಸೆಳೆದರೇನು

ವರದ ಹನುಮೇಶ ವಿಠಲನಂಘ್ರಿಗಳ ನುತಾ

ಸ್ಮರಿಸದಲೇ ನೂರೊರುಷ ಬಾಳಿದರೇನು 5

****