ಕಾಖಂಡಕಿ ಶ್ರೀ ಕೃಷ್ಣದಾಸರು
ಇವನಾ ನೆಲೆಗಾಣೆ ನಮ್ಮಯ್ಯಾ ಸಣ್ಣವನೇ ಪ
ಒರಳವನೆಳೆದೊಯ್ದು ಮರಗಳ ಕೆಡೆಹಿಡಿದ| ಭರದಿ ಪೂತನಿಯಸುವ ಹೀರಿದಾ ನಮ್ಮಯ್ಯಾ 1
ಬೇರಳಲಿ ಗಿರಿಯೆತ್ತಿ ತುರುಗಳ ಕಾಯ್ದಾ| ತೆರೆದು ಬಾಯೊಳು ಜಗವ ತೋರಿದ ನಮ್ಮಾಯ್ಯಾ 2
ವೇಣುನಾದ ಮಾಡಿ ತೃಣಪಶು ಮೊದಲಾದ| ಏಣಾಕ್ಷಿಯರ ಮನವಾ ಭ್ರಮಿಸಿದಾ ನಮ್ಮಯ್ಯಾ 3
ಕಾಳಿ ಮಡುವ ಹೊಕ್ಕು ಕಾಳಿಂಗನೆಳೆತಂದಾ| ಲೀಲೆ ತೋರಲು ಹರಿ ಉದಿಸಿದ ನಮ್ಮಯ್ಯಾ 4
ಗುರುಮಹಿಪತಿ ಸ್ವಾಮಿ ಸುರುತರು ಎನಗಾದಾ| ನರನೆಂಬವರ ಬಾಮಾ ಬಿಗಿಸಿದ ನಮ್ಮಯ್ಯಾ 5
***