..
kruti by Nidaguruki Jeevubai
ಇಷ್ಟಾದರು ದಯಮಾಡು ಪಂಡರಿನಾಥ
ವಿಠ್ಠಲ ನಿನ್ನ ಪಾದ ಮುಟ್ಟಿ ಪ್ರಾರ್ಥಿಪೆನು ಪ
ದಾನಧರ್ಮವು ಮಾಡಬೇಕೆಂದು ಮನವಿರೆ
ದಾನವಾಂತಕ ಕೃಷ್ಣ ಧನವಿಲ್ಲವಯ್ಯ
ಗಾನಲೋಲನೆ ಭಕ್ತಪಾಲ ನಿನ್ನಯ ಪಾದ
ಧ್ಯಾನವ ಮಾಳ್ಪರ ಪಾದಧ್ಯಾನ ಕೊಡಿಸುದೇವ 1
ತೀರ್ಥಯಾತ್ರೆಗಳಿಂದ ಪಾರ್ಥಸಾರಥಿ ಕೃಷ್ಣ-
ಮೂರ್ತಿ ಸೇವಿಸಲಸಮರ್ಥನಾಗಿರುವೆ
ಮಾತು ಮಾತಿಗೆ ಕೃಷ್ಣಗೋವಿಂದ ಮಾಧವ
ಶ್ರೀಪತಿ ಶ್ರೀಧರ ಸಲಹೆಂಬ ಸ್ಮರಣೆ 2
e್ಞÁನಿಗಳೊಡನಾಡಿ ಶ್ರೀನಿವಾಸನೆ ನಿನ್ನ
ನಾನಾಲೀಲೆಗಳ ಧ್ಯಾನಿಸಲಿಲ್ಲ ಹರಿಯೆ
e್ಞÁನಿಗಳರಸ ಭಕ್ತರ ಸುರಧೇನು
ಅe್ಞÁನಿಗಳಳಿದು ಸುe್ಞÁನಜನರ ಸಂಘ 3
ಅಗಣಿತ ಮಹಿಮನೆ ನಿಗಮಗೋಚರ ಕೃಷ್ಣ
ಖಗವಾಹನ ಕಂಸಾರಿಯೆ ದೇವ
ಹಗಲು ಇರುಳು ನಿನ್ನ ಬಗೆಬಗೆ ಸ್ತುತಿಪರ
ಪಾದಗಳು ಸೇವಿಪ ಪರಮಲಾಭವನು 4
ಕರೆ ಕರೆಗೊಳಿಸದೆ ಕಡಲಶಯನನೆ ಎನ್ನ
ತೊಡರುಗಳನೆ ಬಿಡಿಸೆಂದು ಮೊರೆ ಇಡುವೆ
ಮಡುವಿನೊಳ್ ಗಜವನುದ್ಧರಿಸಿ ರಕ್ಷಿಸಿದಂಥ
ಕಮಲನಾಭ ವಿಠ್ಠಲನೆ ನಿನ್ನ ಸ್ಮರಣೆ 5
***