2nd Audio by Vidwan Sumukh Moudgalya
ಶ್ರೀ ವಿಜಯದಾಸರ ರಚನೆ
ಈ ಸೊಬಗು ಇನ್ನಾವ ಕ್ಷೇತ್ರದಲಿ ಕಾಣೆನಾ ಇಲ್ಲಿ |
ವಾಸುದೇವ ಮುನಿಯಿದ್ದ ಕಾರಣ ॥ಪ॥
ರಾಜಧಾನಿಯ ನೋಡೆ ಇಂದ್ರಭವನಕೆ ಮೇಲು |
ತೇಜದಲಿ ನೋಡೆ ಸೂರ್ಯನದೆ ಸೋಲು ||
ಪೂಜೆದಲಿ ನೋಡೆ ಸರ್ವ ಧರಣಿಗೆ ಮೇಲು |
ಭೋಜನದಲಿ ನೋಡೆ ಅಮೃತಕೆ ಮೇಲು ॥೧॥
ಉತ್ಸಾಹದಲಿ ನೋಡೆ ನಹಿ ಪ್ರತಿ ನಹಿ ಪ್ರತಿ |
ಸತ್ಸಂಗತಿಯ ನೋಡೆ ಬುಧ ಸಂಗತಿ ॥
ಸುಚರಿತೆಯ ನೋಡೆ ಶುದ್ಧ ಸತ್ವದ ನೀತಿ |
ಮತ್ಸರ ಮೆರೆದು ನೋಡೆ ಇಲ್ಲೆ ಮುಕುತಿ ॥೨॥
ವಾಲಗದಲಿ ನೋಡೆ ಸತ್ಯಲೋಕಕೆ ಸಮ |
ಪೇಳುವ ಕೀರ್ತನೆ ನೋಡು ವೇದಸ್ತೋಮ ॥
ಬಾಲ ಉಡುಪಿನ ಕೃಷ್ಣ ವಿಜಯವಿಠ್ಠಲನ್ನ |
ತಿಳಿದ ಮಾನವಗೆ ಫಲವು ನಿಷ್ಕಾಮಾ॥೩॥
***
pallavi
I sobagu innAva kSEtradalli kANe nA illi vAsudEva muniyidda kAraNa
caraNam 1
rAjadhAniya nODe indrabhavanake mElu tEjadali nODE sUryanade sOlu
pUjayeli nODe sarva dharaNige mElu bhOjanadali nODe amrtake mElu
caraNam 2
utaShadali mODe nahi prat nahi prati satsangatiya nODe budha sangati
sucariteya nODe shudda satpada nIti matsara maredu nODe illE mukuti
caraNam 3
Olagadali nODe satyalOkakE sama pELuva kIrtane nODe vEdastOma
bAla uDupiya krSNa vijayaviThalarAyana tiLida mAnavage phalavu niShkAmA
***
ಈ ಸೊಬಗು ಇನ್ನಾವ ಕ್ಷೇತ್ರದಲ್ಲಿ ನಾ ಕಾಣೆ
ವಿಜಯದಾಸ
ಈ ಸೊಬಗು ಇನ್ನಾವ ಕ್ಷೇತ್ರದಲಿ ಕಾಣೆನಾ ಇಲ್ಲಿ |
ವಾಸುದೇವ ಮುನಿಯಿದ್ದ ಕಾರಣ ಪ
ರಾಜಧಾನಿಯ ನೋಡೆ ಇಂದ್ರಭವನಕೆ ಮೇಲು |
ತೇಜದಲಿ ನೋಡೆ ಸೂರ್ಯನದೆ ಸೋಲು ||
ಪೂಜೆದಲಿ ನೋಡೆ ಸರ್ವ ಧರಣಿಗೆ ಮೇಲು |
ಭೋಜನದಲಿ ನೋಡೆ ಅಮೃತಕೆ ಮೇಲು 1
ಉತ್ಸಾಹದಲಿ ನೋಡೆ ನಹಿ ಪ್ರತಿ ನಹಿ ಪ್ರತಿ |
ಸತ್ಸಂಗತಿಯ ನೋಡೆ ಬುಧ ಸಂಗತಿ ||
ಸುಚರಿತೆಯ ನೋಡೆ ಶುದ್ಧ ಸತ್ವದ ನೀತಿ |
ಮತ್ಸರ ಮೆರೆದು ನೋಡೆ ಇಲ್ಲೆ ಮುಕುತಿ 2
ಓಲಗದಲಿ ನೋಡೆ ಸತ್ಯಲೋಕಕೆ ಸಮ |
ಪೇಳುವ ಕೀರ್ತನೆ ನೋಡು ವೇದಸ್ತೋಮ ||
ಬಾಲ ಉಡುಪಿಯ ಕೃಷ್ಣ ವಿಜಯವಿಠ್ಠಲರೇಯನ |
ತಿಳಿದ ಮಾನವಗೆ ಫಲವು ನಿಷ್ಕಾಮಾ3
*********
ವಿಜಯದಾಸ
ಈ ಸೊಬಗು ಇನ್ನಾವ ಕ್ಷೇತ್ರದಲಿ ಕಾಣೆನಾ ಇಲ್ಲಿ |
ವಾಸುದೇವ ಮುನಿಯಿದ್ದ ಕಾರಣ ಪ
ರಾಜಧಾನಿಯ ನೋಡೆ ಇಂದ್ರಭವನಕೆ ಮೇಲು |
ತೇಜದಲಿ ನೋಡೆ ಸೂರ್ಯನದೆ ಸೋಲು ||
ಪೂಜೆದಲಿ ನೋಡೆ ಸರ್ವ ಧರಣಿಗೆ ಮೇಲು |
ಭೋಜನದಲಿ ನೋಡೆ ಅಮೃತಕೆ ಮೇಲು 1
ಉತ್ಸಾಹದಲಿ ನೋಡೆ ನಹಿ ಪ್ರತಿ ನಹಿ ಪ್ರತಿ |
ಸತ್ಸಂಗತಿಯ ನೋಡೆ ಬುಧ ಸಂಗತಿ ||
ಸುಚರಿತೆಯ ನೋಡೆ ಶುದ್ಧ ಸತ್ವದ ನೀತಿ |
ಮತ್ಸರ ಮೆರೆದು ನೋಡೆ ಇಲ್ಲೆ ಮುಕುತಿ 2
ಓಲಗದಲಿ ನೋಡೆ ಸತ್ಯಲೋಕಕೆ ಸಮ |
ಪೇಳುವ ಕೀರ್ತನೆ ನೋಡು ವೇದಸ್ತೋಮ ||
ಬಾಲ ಉಡುಪಿಯ ಕೃಷ್ಣ ವಿಜಯವಿಠ್ಠಲರೇಯನ |
ತಿಳಿದ ಮಾನವಗೆ ಫಲವು ನಿಷ್ಕಾಮಾ3
*********