Showing posts with label ಉದ್ಧಾರ ಮಾಡಯ್ಯ ಉಡುಪಿ ನಿಲಯ gopalakrishna vittala. Show all posts
Showing posts with label ಉದ್ಧಾರ ಮಾಡಯ್ಯ ಉಡುಪಿ ನಿಲಯ gopalakrishna vittala. Show all posts

Friday, 27 December 2019

ಉದ್ಧಾರ ಮಾಡಯ್ಯ ಉಡುಪಿ ನಿಲಯ ankita gopalakrishna vittala

ಉದ್ಧಾರ ಮಾಡಯ್ಯ ಉಡುಪಿ ನಿಲಯ
ಹೃದ್ವನಜದಲಿ ನೆಲಸಿ ಅನುಗಾಲ ನಿನ ತೋರಿ ||pa||

ಬಂದೆ ಬಹುದೂರದಲಿ ನಿಂದೆ ತವಚರಣದಡಿ
ತಂದೆ ಮುದ್ದುಮೋಹನ ಗುರುಕರುಣದಿಂದ
ಕುಂದುಗಳನೆಣಿಸದೆಲೆ ಸಿಂಧುಶಯನನೆ
ಹೃದಯ ಮಂದಿರದಿ ಮನೆ ಮಾಡು ಸುಂದರಾತ್ಮನೇ ||1||

ಜನ್ಮಜನ್ಮಾಂತರದ ಅಜ್ಞಾನಗಳ ಕಳೆದು
ಕರ್ಮಸಾಸಿರ ಕಡಿದು ಕರುಣದಿಂದ
ರಮೆಯರಸನೆ ನಿನ್ನ ಅನುಗಾಲ ಸ್ಮರಿಪಂಥ
ಸನ್ಮಾರ್ಗವನೆ ತೋರೊ ಸರ್ವಲೋಕೇಶ ||2||

ಜಪತಪಗಳೊಂದರಿಯೆ ವ್ರತ ನೇಮಗಳ ಕಾಣೆ
ಉಪವಾಸದುಪಟಳವು ಗತಿ ತೋರದೆನಗೆ
ಗುಪಿತಮಾರ್ಗದಿ ನಿನ್ನ ನಾಮಾಮೃತವನುಣಿಸಿ
ಅಪಹಾಸಗೊಳಿಸದಲೆ ಆದರಿಸೊ ಜೀಯ ||3||

ಬೇಡಲೇನನು ನಿನ್ನ ಕಾಡಲೇತಕೆ ನಾನು
ನೀಡುವ ದಾತ ನೀ ಸರ್ವಜ್ಞನಿರಲು
ಮಾಡುವೆನು ಸಾಷ್ಟಾಂಗ ಬೇಡುವೆನು ಪದದಾಸ್ಯ
ನೋಡು ಕರುಣಾದೃಷ್ಟಿಯಿಂದೆನ್ನ ಕಡೆಗೆ ||4||

ಅಂತರಂಗದಲಿಪ್ಪ ಸರ್ವಾಂತರಾತ್ಮಕನೆ
ಚಿಂತನೆಗೆ ನೆಲೆತೋರು ಚಿನ್ಮಯಾತ್ಮಕನೆ
ಕಂತುಪಿತ ಗೋಪಾಲಕೃಷ್ಣವಿಠ್ಠಲನೆ ಸಿರಿ
ಕಾಂತ ಕಾಪಾಡು ಕಡು ಕರುಣಿ ಮಧ್ವೇಶ ||5||
****

ಉದ್ಧಾರ ಮಾಡಯ್ಯ ಉಡುಪಿ ನಿಲಯ
ಹೃದ್ವನಜದಲಿ ನೆಲಸಿ ಅನುಗಾಲ ನಿನ ತೋರಿ ಪ.

ಬಂದೆ ಬಹುದೂರದಲಿ ನಿಂದೆ ತವಚರಣದಡಿ
ತಂದೆ ಮುದ್ದುಮೋಹನ ಗುರುಕರುಣದಿಂದ
ಕುಂದುಗಳನೆಣಿಸದೆಲೆ ಸಿಂಧುಶಯನನೆ
ಹೃದಯ ಮಂದಿರದಿ ಮನೆ ಮಾಡು ಸುಂದರಾತ್ಮನೇ 1
ಜನ್ಮಜನ್ಮಾಂತರದ ಅe್ಞÁನಗಳ ಕಳೆದು
ಕರ್ಮಸಾಸಿರ ಕಡಿದು ಕರುಣದಿಂದ
ರಮೆಯರಸನೆ ನಿನ್ನ ಅನುಗಾಲ ಸ್ಮರಿಪಂಥ
ಸನ್ಮಾರ್ಗವನೆ ತೋರೊ ಸರ್ವಲೋಕೇಶ 2
ಜಪತಪಗಳೊಂದರಿಯೆ ವ್ರತ ನೇಮಗಳ ಕಾಣೆ
ಉಪವಾಸದುಪಟಳವು ಗತಿ ತೋರದೆನಗೆ
ಗುಪಿತಮಾರ್ಗದಿ ನಿನ್ನ ನಾಮಾಮೃತವನುಣಿಸಿ
ಅಪಹಾಸಗೊಳಿಸದಲೆ ಆದರಿಸೊ ಜೀಯ 3
ಬೇಡಲೇನನು ನಿನ್ನ ಕಾಡಲೇತಕೆ ನಾನು
ನೀಡುವ ದಾತ ನೀ ಸರ್ವಜ್ಞನಿರಲು
ಮಾಡುವೆನು ಸಾಷ್ಟಾಂಗ ಬೇಡುವೆನು ಪದದಾಸ್ಯ
ನೋಡು ಕರುಣಾದೃಷ್ಟಿಯಿಂದೆನ್ನ ಕಡೆಗೆ 4
ಅಂತರಂಗದಲಿಪ್ಪ ಸರ್ವಾಂತರಾತ್ಮಕನೆ
ಚಿಂತನೆಗೆ ನೆಲೆತೋರು ಚಿನ್ಮಯಾತ್ಮಕನೆ
ಕಂತುಪಿತ ಗೋಪಾಲಕೃಷ್ಣವಿಠ್ಠಲನೆ ಸಿರಿ
ಕಾಂತ ಕಾಪಾಡು ಕಡು ಕರುಣಿ ಮಧ್ವೇಶ 5
****