Showing posts with label ಎಂತಹುದೊ ನಿನ್ನಯ ಭಕುತಿ ಎನಗೆ ಶ್ರೀಕಾಂತ ನಿನ್ನಯ ಒಲುಮೆಯಿಲ್ಲದ ಮೂಢಾತ್ಮನಿಗೆ neleyadikeshava. Show all posts
Showing posts with label ಎಂತಹುದೊ ನಿನ್ನಯ ಭಕುತಿ ಎನಗೆ ಶ್ರೀಕಾಂತ ನಿನ್ನಯ ಒಲುಮೆಯಿಲ್ಲದ ಮೂಢಾತ್ಮನಿಗೆ neleyadikeshava. Show all posts

Wednesday, 1 September 2021

ಎಂತಹುದೊ ನಿನ್ನಯ ಭಕುತಿ ಎನಗೆ ಶ್ರೀಕಾಂತ ನಿನ್ನಯ ಒಲುಮೆಯಿಲ್ಲದ ಮೂಢಾತ್ಮನಿಗೆ ankita neleyadikeshava

..

ಎಂತಹುದೊ ನಿನ್ನಯ ಭಕುತಿ ಎನಗೆ - ಶ್ರೀ-ಕಾಂತ ನಿನ್ನಯ ಒಲುಮೆಯಿಲ್ಲದ ಮೂಢಾತ್ಮನಿಗೆ ಪ


ಹಿಂದೆ ಮಾಡಿದ ಸುಕೃತ ಫಲವು ಮೊದಲಿನಿತಿಲ್ಲಇಂದು ಬಂದಡೆ ಒಳ್ಳೆ ಮತಿಯ ಕೊಡಲಿಲ್ಲಸಂದ ವಯಸನು ತಿಳಿದು ಕುಂದುತಿದೆ ಎನ್ನ ಮನ-ದಂಧಕಾರವ ಬಿಡಿಸಿ ಹೊಂದಿಸು ಜ್ಞಾನವನು 1


ವೇದಶಾಸ್ತ್ರ ಶಬ್ದ ತರ್ಕ ಮೀಮಾಂಸೆಗಳಓದಿದವನಲ್ಲ ನಿನ್ನಯ ಭಕುತಿಗಧಿಕವಾದ ಇನ್ನೊಂದೇನನುಸುರುವೆನು ನಾ ಮುನ್ನ ಸಂ-ಪಾದಿಸುವ ಭಕುತಿ ಇನ್ನೆಂತಿಹುದೊ ದೇವ 2


ಹುಟ್ಟಿದ ಮೊದಲುಗೊಂಡು ಇಂದು ಪರಿಯಂತರವುಭ್ರಷ್ಟನಾಗಿ ಪರರ ಸೇವೆಯಿಂದಿರುತಿಹೆನುಇಷ್ಟಲ್ಲದಿನ್ನೆನಗೆ ತೃಪ್ತಿ ಇನ್ನೆಂತಹುದೀಕಷ್ಟ ಶರೀರದೊಳು ತೊಳಲಲಾರೆನು ಹರಿಯೆ 3


ನರಜನ್ಮವೆಂಬ ಪಾತಕದ ಪಂಜರದೊಳಗೆಸ್ಥಿರವೆಂಬೊ ಅಹಂಕೃತಿ ಜೀವನವ ನಿರ್ಮಿಸಿಎರವಿನ ಮಾತಾಪಿತರನುಜರೆಂಬಉರಿಕಾವು ಕ್ಷಯವೆಂಬ ಸರಿಗಳನು ವಂದಿಸುವೆನು 4


ಇನಿತುಪರಿಯಲಿ ನಾನು ಹಲುಬಿದೊಡೆನೀನು ಸುಮ್ಮನಿದ್ದೊಡೆ ಬಹು ಅಪಕೀರ್ತಿಯುನಿನ್ನ ದಾಸಗೊಲಿದು ಸಲಿಸಯ್ಯ ಮನದಿಷ್ಟಕನಕಾದ್ರಿಯೊಳು ನೆಲಸಿದಾದಿಕೇಶವರಾಯ 5

***