Showing posts with label ಎಂತು ಮರುಳಾದೆ ನೀ ಯದಿಯ ಬಿಗುವಿನಲಿ vijaya vittala. Show all posts
Showing posts with label ಎಂತು ಮರುಳಾದೆ ನೀ ಯದಿಯ ಬಿಗುವಿನಲಿ vijaya vittala. Show all posts

Thursday 17 October 2019

ಎಂತು ಮರುಳಾದೆ ನೀ ಯದಿಯ ಬಿಗುವಿನಲಿ ankita vijaya vittala

ವಿಜಯದಾಸ
ಎಂತು ಮರುಳಾದೆ ನೀ ಯದಿಯ ಬಿಗುವಿನಲಿ ತಿರುಗಿ |
ಪಂಥದಲ್ಲಿ ಕೆಡಲಿಬೇಡ ಎರಡು ದಿನ |
ಸಂತೆ ನೆರೆದಂತೆ ಮೂಢ ಇಪ್ಪದಿದು |
ಸಂತತ ತೊರೆದು ಬಾಡೊ ಪ್ರಾಣಿ ಪ್ರಾಣಿ ಪ
ವಿಂಚುಗೂಳನು ತಿಂದು ಮನೆ ಮನೆಗಳು ತಿರುಗಿ |
ಸಂಚಿತಾರ್ಥವ ತಿಳಿಯದೆ ಮರುಳಾದ |
ಪರ |
ಪಂಚವನು ನೀ ಕಳಿಯದೆ ವ್ಯರ್ಥಾಯ |
ವಂಚನಿಂದಲಿ ನಡೆದು ಬಾಯಿ ತೆರೆದು | ಹಲ್ಲನು |
ಹಂಚಿಕೆ ತೋರಿದಂತೆ ಮೃತ್ಯುವಿನ |
ಪಂಚದಲಿ ಸೇರಿದಂತೆ | ಆಗುವುದು |
ಕಂಚು ಕೆಳಗೆ ಬಿದ್ದಂತೆ ಪ್ರಾಣಿ 1

ನುಗ್ಗು ನುಸಿಯಾಗದಿರು | ನೂಕು ನಿನ್ನಹಂಕಾರ |
ಮುಗ್ಗದಿರು ಈ ಬಲಕಿಗೆ ಸ್ಥಿರವಾಗಿ |
ಬಗ್ಗು ನಡೆವಳಿ ನಡೆದು |
ವೆಗ್ಗಳದ ನಡೆವಳಿ ನಡೆದು |
ವೆಗ್ಗಳದ ಧರ್ಮದಾ ಸುಗ್ಗಿಯಲಿ ದಿನವ ಹಾಕೊ |
ಬಿಡು ಬಿಡು ಅಗ್ಗಳಿಕೆತನವೆ |
ಸಾಕು ಆವಾಗ ತೆಗ್ಗಿಕೊಂಡಿರಲಿ ಬೇಕು | ಪ್ರಾಣಿ 2

ಇನ್ನಾದರೂ ಕೇಳು | ಪುಣ್ಯವಂತರ ಕೂಡು |
ನಿನ್ನವರು ನಿನಗೆ ದಾರೊ |
ಕಣ್ಣಾಗೆ ಎಣ್ಣೆ ಬಿದ್ದಂತೆ ಸಾರೊ ಬಾಯಿಂದ |
ಬೆನ್ನಿಗೆ ಬಂದ ವಿಚಾರೊ ತುದಿಯಲಿ |
ಮಣ್ಣು ಮಣ್ಣನೆ ಕಲಿತು ಹೋಗುವುದು ನಿಶ್ಚಯವು |
ಚೆನ್ನಾಗಿ ಎಚ್ಚೆತ್ತುಕೋ ಈ ಮಾತಿಗೆ |
ಖಿನ್ನನಾಗುವದೇತಕೊ ಸಾವಿರಕು |
ಮುನ್ನಿಲ್ಲವೊ ಮನಸಿತೊ ಪ್ರಾಣಿ 3

ವೇದಶಾಸ್ತ್ರವನರಿಯೆ ಆದಿಪುರಾಣಗಳು |
ಅದ್ವೈತ |
ವಾದವರ ಕೂಡದಿರು ಇದೆ ಮಿಗಿ
ಲಾದರು ಮರಿಯದಿರು ಉತ್ತಮ |
ಸಿರಿ ವಿಜಯವಿಠ್ಠಲನ ಶ್ರೀ |
ಪಾದವನು ಒಂದೇ ಭಕ್ತಿಯಿಂದಲಾ |
ರಾಧಿಸು ಇದಕೆ ಯುಕ್ತಿ ಕಡಿಯದಲೆ |
ಮಾಧವನು ಕೊಡುವ ಮುಕ್ತಿ ಪ್ರಾಣಿ4
*********೮