Showing posts with label ಎಂಥ ಪಾಪವನು ಮಾಡಿರುವೆನೋ ಶ್ರೀಹರಿಯೇ gadugina veeranarayana. Show all posts
Showing posts with label ಎಂಥ ಪಾಪವನು ಮಾಡಿರುವೆನೋ ಶ್ರೀಹರಿಯೇ gadugina veeranarayana. Show all posts

Wednesday, 1 September 2021

ಎಂಥ ಪಾಪವನು ಮಾಡಿರುವೆನೋ ಶ್ರೀಹರಿಯೇ ankita gadugina veeranarayana

..

kruti by ವೀರನಾರಾಯಣ Veeranarayana 


ಎಂಥ ಪಾಪವನು ಮಾಡಿರುವೆನೋ ಶ್ರೀಹರಿಯೇ 

ಇಂಥ ದುರ್ದೆಸೆಗೆನ್ನ ಎಳೆತಂದು ಬಿಡಲಿಕ್ಕೆ ಪ


ಉದಯ ಕಾಲದೊಳೆದ್ದು ಉದರ ಪೋಷಣೆಗಾಗಿಹದವನರಿಯದೆ ಬಳಲಿ ಅಂತಿಂತು ಬಡೆದಾಡಿಬದುಕು ತಂದೊಡಲ ಹೊರಕೊಂಡು ಸಲೆನನ್ನಪದವ ನೆನೆಯಲು ಸ್ವಲ್ಪ ಸಹ ವೇಳೆ ಸಿಗದಂತೆ 1


ಹಿಡಿದ ಕಾರ್ಯಗಳೆಲ್ಲ ಬಿಡದೆ ನಿಷ್ಫಲವಾಗಿಒಡವೆ ಇಲ್ಲದ ಬರಿಯ ಒಡೆತನಕೆ ಅಣಿಮಾಡಿಮಡದಿ ಮಕ್ಕಳ ಬಿರುಸು ನುಡಿಗೇಳಿ ಮನನೊಂದುಸುಡುಬಾಳ್ವೆ ಇದನೆಂದು ಮುಡುಕುವಂದದು ಗೈಸಿ 2


ನಂಬಿದವರನು ಹರಿಯು ಬೆಂಬಿಡನು ಎಂದೆಂದುಎಂಬ ಬಿರುದನು ತೊರೆದು ಇಂಬುಗೊಡದಿರಲಿಕ್ಕೆಅಂಬುಜಾಕ್ಷನೆ ನಿನಗೆ ಸಂಬಂಧವಿರದೇನುಹಂಬಲಿಪ ದುಃಸ್ಥಿತಿಗೆ ತುಂಬ ತಂದಿಡಲಿಕ್ಕೆ 3


ಅಣುಗರಿಗೆ ಉಣಿಸಲಿಕೆ ಹಣವೆತ್ತ ಗಳಿಸಲಿಫಣಿಶಯನ ನಿನಗಿನ್ನು ಗುಣವೆತ್ತ ತೋರಿಸಲಿಮಣಿಗಳನು ಎಣಿಸುತ್ತ ಪ್ರಣವೆತ್ತ ಧೇನಿಸಲಿಹಣಿವ ಭವದೊಳು ಸಿಲುಕಿ ಕ್ಷಣವು ಸಹ ಸಿಗದಾಯ್ತು 4


ಬಾಳಿನೊಳು ಸೌಖ್ಯವೇ ಆಳವೈಶ್ವರ್ಯವೆತೋಳಿನೊಳು ದಾಢ್ರ್ಯವೆ ಚಿತ್ತದೊಳು ಸ್ಥೈರ್ಯವೆಹೇಳು ಗದುಗಿನ ವೀರನಾರಾಯಣನೆ ಮಣಿವೆ 5

***