ಎಂದಿದ್ದರೀ ಕೊಂಪೆ ಎನಗೆ ನಂಬಿಕೆಯಿಲ್ಲ
ಮುಂದರಿತು ಹರಿಪಾದ ಹೊಂದುವುದು ಲೇಸು ।।ಪ।।
ಎಲುವುಗಳು ತೊಳೆ ಜಂತೆ ನರಗಳವು ಬಿಗಿದಂತೆ
ಬಲಿದ ಚರ್ಮವು ಮೇಲು ಹೊದಿಕೆಯಂತೆ
ಗಳಗಳನೆ ನುಡಿವ ನಾಲಗೆ ಗಂಟೆಯುಲಿಯಂತೆ
ಕೆಲಕಾಲಕೀ ಕೊಂಪೆ ಕಡೆಗಾಹುದಂತೆ ।।೧।।
ಕಂಡಿಗಳು ಒಂಬತ್ತು ಕಳಬಂಟರೈವರು
ಅಂಡಲೆವುದೊತ್ತಿನಲಿ ಷಡುವರ್ಗವು
ಮಂಡಲಕೆ ಹೊಸಪರಿಯು ಮನ್ಮಥನ ಠಾಣ್ಯವಿದು
ಮಂಡೆಹೋಗುವುದನ್ನು ಅರಿಯದೀ ಕೊಂಪೆ ।।೨।।
ಕೊಂಪೆಯಲಿ ಶೃಂಗಾರ ಕೊಂಡಾಡಲಳವಲ್ಲ
ಕೆಂಪುಬಣ್ಣಗಳಿಂದ ಚೆನ್ನಾಯಿತು
ಇಂಪಿನಲಿ ಕಾಗಿನೆಲೆಯಾದಿಕೇಶವನನ್ನು
ಸೊಂಪಿನಲಿ ನೆನೆನೆನೆದು ಸುಖಿಯಾಗೋ ಮನುಜಾ ।।೩।।
***
ಮುಂದರಿತು ಹರಿಪಾದ ಹೊಂದುವುದು ಲೇಸು ।।ಪ।।
ಎಲುವುಗಳು ತೊಳೆ ಜಂತೆ ನರಗಳವು ಬಿಗಿದಂತೆ
ಬಲಿದ ಚರ್ಮವು ಮೇಲು ಹೊದಿಕೆಯಂತೆ
ಗಳಗಳನೆ ನುಡಿವ ನಾಲಗೆ ಗಂಟೆಯುಲಿಯಂತೆ
ಕೆಲಕಾಲಕೀ ಕೊಂಪೆ ಕಡೆಗಾಹುದಂತೆ ।।೧।।
ಕಂಡಿಗಳು ಒಂಬತ್ತು ಕಳಬಂಟರೈವರು
ಅಂಡಲೆವುದೊತ್ತಿನಲಿ ಷಡುವರ್ಗವು
ಮಂಡಲಕೆ ಹೊಸಪರಿಯು ಮನ್ಮಥನ ಠಾಣ್ಯವಿದು
ಮಂಡೆಹೋಗುವುದನ್ನು ಅರಿಯದೀ ಕೊಂಪೆ ।।೨।।
ಕೊಂಪೆಯಲಿ ಶೃಂಗಾರ ಕೊಂಡಾಡಲಳವಲ್ಲ
ಕೆಂಪುಬಣ್ಣಗಳಿಂದ ಚೆನ್ನಾಯಿತು
ಇಂಪಿನಲಿ ಕಾಗಿನೆಲೆಯಾದಿಕೇಶವನನ್ನು
ಸೊಂಪಿನಲಿ ನೆನೆನೆನೆದು ಸುಖಿಯಾಗೋ ಮನುಜಾ ।।೩।।
***
Endiddari kompe enage nambikeyilla
Mundaritu haripada honduvudu lesu ||pa||
Eluvugalu tole jante naragalavu bigidante
Balida charmavu melu hodikeyante
Galagalane nudiva nalage ganteyuliyante
Kelakalaki kompe kadegahudante ||1||
Kandigalu ombattu kalabamtaraivaru
Andalevudottinali shaduvargavu
Mandalake hosapariyu manmathana thanyavidu
Mandehoguvudannu ariyadi kompe ||2||
Kompeyali srungara kondadalalavalla
Kempubannagalinda chennayitu
Impinali kagi neley adikesavanannu
Sompinali nenenenedu sukiyago manuja ||3||
***