ಎಂದೆಂದು ಇಂಥ ಚೋದ್ಯ ಕಂಡದ್ದಿಲ್ಲವೊ ಪ
ಅಂಗಡಿ ಬೀದಿಯೊಳೊಂದು ಆಕಳ ಕರು ನುಂಗಿತುಲಂಘಿಸುವ ಹುಲಿಯ ಕಂಡು ನರಿಯು ನುಂಗಿತು 1
ಹುತ್ತದೊಳಾಡುವ ಸರ್ಪ ಮತ್ತ ಗಜವ ನುಂಗಿತುಉತ್ತರ ದಿಶೆಯೊಳು ಬೆಳುದಿಂಗಳಾಯಿತಮ್ಮ 2
ಯೋಗ ಮಾರ್ಗಿ ಕಾಗಿನೆಲೆಯಾದಿಕೇಶವರಾಯಭಾಗವತರ ಬೆಡಗಿದು ಬೆಳುದಿಂಗಳಾಯಿತಮ್ಮ 3
***
ಎಂದೆಂದು ಇಂಥ ಚೋದ್ಯ ಕಂಡದ್ದಿಲ್ಲವೋ
ಅಂಗಡಿ ಬೀದಿಯೊಳೊಂದು ಆಕಳ ಕರು ನುಂಗಿತು
ಲಂಘಿಸುವ ಹುಲಿಯ ಕಂಡು ನರಿ ನುಂಗಿತು
ಹುತ್ತದೊಳಾಡುವ ಸರ್ಪ ಮತ್ತಗಜವ ನುಂಗಿತು
ಉತ್ತರದಿಶೆಯೊಳು ಬೆಳುದಿಂಗಳಾಯಿತಮ್ಮಾ
ಯೋಗಮಾರ್ಗಿ ಕಾಗಿನೆಲೆಯಾದಿಕೇಶವರಾಯ
ಭಾಗವತರ ಬೆಡಗಿದು ಬೆಳುದಿಂಗಳಾಯಿತಮ್ಮಾ ||
***