Showing posts with label ಎಡ್ಡಂ ತಿಡ್ಡಂ ಮಾತುಗಳಾಡುವಿದಡ್ಡನು ಶಾಣ್ಯಾನೋ indiresha. Show all posts
Showing posts with label ಎಡ್ಡಂ ತಿಡ್ಡಂ ಮಾತುಗಳಾಡುವಿದಡ್ಡನು ಶಾಣ್ಯಾನೋ indiresha. Show all posts

Saturday, 28 December 2019

ಎಡ್ಡಂ ತಿಡ್ಡಂ ಮಾತುಗಳಾಡುವಿದಡ್ಡನು ಶಾಣ್ಯಾನೋ ankita indiresha

ಎಡ್ಡಮ್ ತಿಡ್ಡಮ್ ಮಾತುಗಳಾಡುವಿ
ದಡ್ಡನು ಶಾಣ್ಯಾನೋ
ಗುಡ್ಡದಿ ಸೇರುತ ಬಡ್ಡಿ ಸಹಿತ ಪರ
ದುಡ್ಡು ಸೆಳೆವರೇನೋ ll ಪ ll

ಕೊಟ್ಟಾದನ್ನುಣ್ಣುತ ದೇಹವ ಪುಷ್ಟಿಸಿ ಕಾದಿರುಶ
ಕಟ್ಟಿದ ಹಣವನು ಕಷ್ಟದಿ ಕೊಡದಿರೆ ಕುಟ್ಟಿ ಸೆಳೆದು ತರುವಿ
ಚಾಳಿ ಕೆಟ್ಟದು ಕಲಿತಿರುವಿ ll 1 ll

ಶಿಷ್ಟರು ಗುಡಿಯೊಳು ಬಂದರೆ ಅವರನು ಅಟ್ಟಿಸಿ ಹೊರಡಿಸುವಿ
ಮೊಟ್ಟೆಯಲಿ ಹಣ ಕಟ್ಟಿದವರು ಬರೆ ದೃಷ್ಟಿಸಿ ಮನ್ನಿಸುವಿ
ಚಾಳಿ ಕೆಟ್ಟದು ಕಲಿತಿರುವಿ ll 2 ll

ಹೇಳಿದ ಮಾತನು ಕೇಳದೆ ನಮ್ಮೊಳು ಕಾಳಗ ನಡೆಸಿರುವಿ
ಶ್ರೀಲೋಲನೆ ಮುಖತೋರಿಸು ಎಂದರೆ ಆಲಯಕ್ಹೋಗೆನುವಿ 
ಚಾಳಿ ಕೆಟ್ಟದು ಕಲಿತಿರುವಿ ll 3 ll

ಹುಚ್ಚನ ತೆರದಲೆ ಮಾತುಗಳಾಡುವಿ ನಿಶ್ಚಯ ಒಂದಿಲ್ಲಾ
ತುಚ್ಛಿಸಿ ಎಲ್ಲವ ನಿನ್ನಲಿ ಬಂದರೆ ಮತ್ಸರ ನಡೆಸಿರುವಿ 
ಚಾಳಿ ಕೆಟ್ಟದು ಕಲಿತಿರುವಿ ll 4 ll

ಭೂಸುರ ನಿಲಯದಿ ವಾಸಿಸೆ ನಿಜ ಶುಭ ದಾಸನಾಗಿದ್ದಿ
ಈ ಸಮಯದೀತನು ಪೋಷಿಸಲು ವಿಷಯಾಸೆಯನಾಗಿದ್ದಿ
ಧನರಾಶಿಯೊಳಗೆ ಬುದ್ಧಿ ಇಂದಿರೇಶನೆ ಕಲಿಸಿದ್ದಿ ll 5 ll

******

ಎಡ್ಡಂ ತಿಡ್ಡಂ ಮಾತುಗಳಾಡುವಿದಡ್ಡನು ಶಾಣ್ಯಾನೋಗುಡ್ಡದಿ ಸೇರುತ ಬಡ್ಡಿ ಸಹಿತ ಪರದುಡ್ಡು ಸೆಳೆವರೇನೋ ಪ

ಕೊಟ್ಟಾದನ್ನುಣ್ಣುತ ದೇಹವ ಪುಷ್ಟಿಸಿ ಕಾದಿರುಶಕಟ್ಟಿದ ಹಣವನು ಕಷ್ಟದಿ ಕೊಡದಿರೆ ಕುಟ್ಟಿ ಸೆಳೆದು ತರುವಿ ಚಾಳಿ ಕೆಟ್ಟದು ಕಲಿತಿರುವಿ 1

ಶಿಷ್ಟರು ಗುಡಿಯೊಳು ಬಂದರೆ ಅವರನು ಅಟ್ಟಿಸಿ ಹೊರಡಿಸುವಿಮೊಟ್ಟೆಯಲಿ ಹಣ ಕಟ್ಟಿದವರು ಬರೆ ದೃಷ್ಟಿಸಿ ಮನ್ನಿಸುವಿಚಾಳಿ ಕೆಟ್ಟದು ಕಲಿತಿರುವಿ 2

ಹೇಳಿದ ಮಾತನು ಕೇಳದೆ ನಮ್ಮೊಳು ಕಾಳಗ ನಡೆಸಿರುವಿಶ್ರೀಲೋಲನೆ ಮುಖತೋರಿಸು ಎಂದರೆ ಆಲಯಕ್ಹೋಗೆನುವಿಚಾಳಿ ಕೆಟ್ಟದು ಕಲಿತಿರುವಿ 3

ಹುಚ್ಚುನ ತೆರದೆಲೆ ಮಾತುಗಳಾಡುವಿ ನಿಶ್ಚಯ ಒಂದಿಲ್ಲಾತುಚ್ಛಿಸಿ ಎಲ್ಲವ ನಿನ್ನಲಿ ಬಂದರೆ ಮತ್ಸರ ನಡೆಸಿರುವಿಚಾಳಿ ಕೆಟ್ಟದು ಕಲಿತಿರುವಿ 4

ಭೂಸುರ ನಿಲಯದಿ ವಾಸಿಸೆ ನಿಜ ಶುಭ ದಾಸನಾಗಿದ್ದಿಈ ಸಮಯದೀತನು ಪೋಷಿಸಲು ವಿಷಯಾಸೆಯನಾಗಿದ್ದಿಧನರಾಸಿಯೊಳಗೆ ಬುದ್ಧಿ ಇಂದಿರೇಶನೆ ಕಲಿಸಿದ್ದಿ 5
**********