ಎತ್ತಿಕೊಂಡ್ಹೋಗುವೆನೆ ಈ ಕೂಸಿನ್ನ ಎತ್ತಿಕೊಂಡ್ಹೋಗುವೆನೆ ಪ
ಎತ್ತಿಕೊಂಡ್ಹೋಗುವೆ ಮುತ್ತಿನಂಥಾ ಕೂಸುಹತ್ತಲಿ ಬರುವುದು ಚಿತ್ತಬಿಟ್ಟಗಲದು ಅ.ಪ.
ಗುಂಡು ಬಿಂದಲಿ ಕೈಯೊಳು ಮುತ್ತಿನ ದಿವ್ಯ ಚೆಂಡುಪಿಡಿದ ಬಿಡನುಹಿಂಡು ಬಾಲರ ಕೂಡಿಕೊಂಡು ಆಡುವ ಕೂಸುಇಂಥ ಕಂದನ್ನ ಪಡೆದಿಯೇನೇ ಗೋಪಮ್ಮ ನೀ 1
ಕಾಲ ಕಡಗರುಳಿಯು ಕಾಲೊಳಗಿಟ್ಟು ನೀಲ ಮಾಣಿಕ ಗೆಜ್ಜೆಯುಭಾಳ ಕಡೆಗೆ ಪೋಗಿ ಲೋಲಾಡುವ ದೃಷ್ಟಿಮಾಲೆಯನ್ಹಾಕಿ ತಾರೆ ಗೋಪಮ್ಮ 2
ಅರಳೆಲೆನಿಟ್ಟಿಹದು ಮುಂದಲೆಯಲ್ಲಿ ಜರದ ಕುಂಚಿಗೆ ಇಹುದುತೆರದ ಕಣ್ಣು ಮುಚ್ಚಿ ತೆರೆದು ನೋಡುತಲಿದ್ದಎರೆದು ಮಲಗಿಸಿದೆಯೇನೆ ಗೋಪಮ್ಮ ನೀ 3
ಎಷ್ಟು ಜನ್ಮದ ಪುಣ್ಯವು ಬಂದೊದಗೀತ ಪುಟ್ಟಿದೆ ಇಂಥ ಕೂಸುಪುಟ್ಟ ಬಾಲಗೆ ಉಮ್ಮಕೊಟ್ಟು ಬಟ್ಟಲಿ ನಾನುದೃಷ್ಟಿಯು ಮುರಿಯುವೆನೇ ಗೋಪಮ್ಮ ನಾ 4
ಮಂದಿ ಕೈಯಲಿ ಕೊಡೆನೆ ಈ ಕೂಸಿನ್ನ ತಂದು ಕೊಡುವೆನೆ ನಾನುಇಂದಿರೇಶನ ಬಿಟ್ಟು ನಿಂದಲಾರದ ಮನಇಂಥ ಕಂದನ್ನ ಪಡೆದಿಹೆನೆ ಗೋಪಮ್ಮ ನೀ 5
*********