Showing posts with label ಎನ್ನ ನುಡಿ ಪುಸಿಯಲ್ಲ ಈ ಜಗದೊಳು neleyadikeshava. Show all posts
Showing posts with label ಎನ್ನ ನುಡಿ ಪುಸಿಯಲ್ಲ ಈ ಜಗದೊಳು neleyadikeshava. Show all posts

Wednesday, 1 September 2021

ಎನ್ನ ನುಡಿ ಪುಸಿಯಲ್ಲ ಈ ಜಗದೊಳು ankita neleyadikeshava

 ..

ಎನ್ನ ನುಡಿ ಪುಸಿಯಲ್ಲ ಈ ಜಗದೊಳು ಪ


ಅರವಿಂದವಿಲ್ಲದಿಹ ಕೊಳವು ತಾ ಕಂಗಳವುಹರಿಣಾಂಕನಿಲ್ಲದಿಹ ಇರುಳು ಮರುಳುಸ್ವರಭೇದವಿಲ್ಲದಿಹ ಸಂಗೀತವಿಂಗೀತಸರಸವಿಲ್ಲದಿಹ ಸತಿಯ ಭೋಗ ತನುರೋಗ 1


ಪಂಥ ಪಾಡುಗಳನರಿಯದ ಬಂಟನವ ತುಂಟಅಂತರವರಿಯದಾ ವೇಶಿ ಹೇಸಿದಂತಿಯಿಲ್ಲದ ಅರಸು ಮುರಿದ ಕಾಲಿನ ಗೊರಸುಅಂತಸ್ಥವಿಲ್ಲದ ಪ್ರಧಾನಿ ಮದ್ಯಪಾನಿ2


ಮಾಗಿಯಲಿ ಸತಿಯನಗಲಿದ ಕಾಂತನವ ಭ್ರಾಂತಪೂಗಣೆಯ ಗೆಲಿಯದಿಹ ನರ ಗೋಖುರಭೋಗಿಸದೆ ಇಹಪರಕೆ ಗಳಿಸಿದರ್ಥ ಅಪಾರ್ಥಕಾಗಿನೆಲೆಯಾದಿಕೇಶವನ ಭಕ್ತ ಮುಕ್ತ 3

***