Showing posts with label ಎನ್ನಲ್ಲಿ ಅವಗುಣ ಶತಸಾವಿರವಿರೆ vijaya vittala. Show all posts
Showing posts with label ಎನ್ನಲ್ಲಿ ಅವಗುಣ ಶತಸಾವಿರವಿರೆ vijaya vittala. Show all posts

Wednesday, 16 October 2019

ಎನ್ನಲ್ಲಿ ಅವಗುಣ ಶತಸಾವಿರವಿರೆ ankita vijaya vittala

ಎನ್ನಲ್ಲಿ ಅವಗುಣ ಶತಸಾವಿರವಿರೆ |
ಅನ್ಯರ ಕರೆದಾನು ನಡತೆ ಇದೇನೆಂಬೆ ಪ
ವೇದವನೋದಿದೆ ಪರರಿ | ಗಾದÀರಿಸಿ ಮುಕುತಿಗೆ |
ಹಾದರಹಳು ನಾರಿ | ಮಾದಿಗÀನ ಪೋದಂತೆ 1

ಧನದಾಸೆಯಿಂದ ಸಾಧನವಾಗದೆಂದು |
ಜನರಿಗೆ ಉಪದೇಶವನು ಮಾಡುವೆ |
ತೃಣ ಹತ್ತದಿದ್ದ | ವಧನರಾಶಿ ಕದ್ದಂತೆ2

ರಸನೇಂದ್ರಿಯಗಳ ಬಂ | ಧಿಸಬೇಕೆಂದು ನಾನು |
ಉಸುರುವೆ ಅಲ್ಲಲ್ಲಿ ಕುಶಲನಾಗಿ |
ಅಮೃತ |
ರಸವಲ್ಲೆನೆಂದಾವ ಮುಸುರಿಯ ಮೆದ್ದಂತೆ 3

ಒಡಿವೆ ವಸ್ತುಗಳು ಸಂಗಡ ಬಾರವು ಮಮತೆ |
ಬಿಡು ಸಂಸಾರವಿದು ಕಡಿಗೆ ಭವದ |
ಮಡವು ಸಿದ್ಧವೆಂದು ನುಡಿವೆನೊ ಪರರಿಗೆ |
ಯಡಹಿಯೊ ಎಂದಾವ ಗಿಡನೇರಿ ಬಿದ್ದಂತೆ 4

ಭಕುತಿ ಕೂಡಿದ ವಿರಕುತಿ ಲೇಶವಿಲ್ಲಾ |
ಯುಕುತಿ ಬಾಯಲಿ ನಾರಕಕೆ ಸಾಧನಾ |
ಲಕುಮಿವಲ್ಲಭ ನಮ್ಮ ವಿಜಯವಿಠ್ಠಲ ನಿನ್ನ ಅ |
ರ್ಚಕನಾಗಿ ಬದುಕತಕ್ಕದ್ದು ಮಾರ್ಗವ ತೋರೊ 5
*********