Showing posts with label ಎನ್ನಾಣೆ ಬ್ಯಾಡ ಬ್ಯಾಡವೋ ರಂಗ ನಿನಗಿದು hayavadana ENNANE BYAADA BYAADAVO RANGA NINAGIDU. Show all posts
Showing posts with label ಎನ್ನಾಣೆ ಬ್ಯಾಡ ಬ್ಯಾಡವೋ ರಂಗ ನಿನಗಿದು hayavadana ENNANE BYAADA BYAADAVO RANGA NINAGIDU. Show all posts

Wednesday, 1 December 2021

ಎನ್ನಾಣೆ ಬ್ಯಾಡ ಬ್ಯಾಡವೋ ರಂಗ ನಿನಗಿದು ankita hayavadana ENNANE BYAADA BYAADAVO RANGA NINAGIDU



ಎನ್ನಾಣೆ ಬ್ಯಾಡ ಬ್ಯಾಡವೋ ರಂಗ ನಿನಗಿದುಚೆನ್ನಗಿತ್ತೇರ ಮನೆ ಗೋವಿಂದ ಪ.


ಗೋಪೇರ ಮನೆಗಳ ಪೊಕ್ಕು ಬಹುಪರಿ-ತಾಪವ ಮಾಡುವರೇ ಕಂದ ಗೋವಿಂದಕಾಪಟ್ಯಸತಿಯರ ಮಾತ ನೀನಾಲಿಸಿಕೋಪಿಸಬೇಡವಮ್ಮಾ ಗೋಪೆಮ್ಮ 1


ಎನ್ನಪ್ಪ ಕಂದನೆ ಚಿಣ್ಣ ಗೋಪೇರು ಬಂದುನಿನ್ನ ದೂರುತಲೈದಾರೋ ಗೋವಿಂದಕನ್ನೇರು ಕೊಬ್ಬಿಂದ ಅನ್ಯಾಯ ನುಡಿತಾರೆÀಇನ್ನೇನು ಮಾಡಲಮ್ಮ ಗೋಪೆಮ್ಮ 2


ದಧಿ ದುಗ್ಧ ಭಾಂಡ ಒಡೆದು ಗೋಪಿಯರನ್ನುಸದರ ಮಾಡುವರೇ ಕಂದ ಗೋವಿಂದಉದಯದಿ ಗುದ್ದ್ಯಾಡಿ ಮಾರ್ಜಾಲಂಗಳು ಬೀಳೆದÀಧಿಭಾಂಡ ಜಾರಿತಮ್ಮ ಗೋಪೆಮ್ಮ 3


ಬಸವನ ಆಟದಿ ಶಿಶುಗಳೆಲ್ಲರ ಕೂಡಿಮಸಿಮಣ್ಣು ಮೈಯ್ಯಾದವೊ ಗೊವಿಂದಬಿಸಜಾಕ್ಷಿಯರು ತಮ್ಮ ಮನೆಕೆಲಸದ ಕೈಯ್ಯಮಸಿಮಣ್ಣು ಒರೆಸಿದರೆ ಗೋಪೆಮ್ಮ 4


ಒರಗಿದ್ದ ಹಸುಗಳೆಬ್ಬಿಸಿ ಕರುಗಳ ಬಿಟ್ಟುದುರುಳತನವ ಮಾಡೋರೆ ಗೋವಿಂದನೆರೆದಿದ್ದ ಶಿಶುಗಳಾಡುವ ಗುಲ್ಲ ತಾವ್ ಕೇಳಿತುರುಶಿಶು ಬೆದರಿತಮ್ಮಾ ಗೋಪೆಮ್ಮ 5


ಅಣ್ಣ ಬಲರಾಮ ನಿನ್ನ ಬನ್ನಣೆ ಸುದ್ದಿಯಚೆನ್ನಾಗಿ ಪೇಳಿದನೊ ಗೋವಿಂದಉನ್ನಂತ ದಾಯಾದಿಯ ಮಾತುಗಳ ನೀನುಮನ್ನಿಸ ಬೇಡವಮ್ಮ ಗೋಪೆಮ್ಮ 6


ಬಾಯೆನ್ನ ರನ್ನವೆ ಬಾಯೆನ್ನ ಚಿನ್ನವೆಬಾಯೆನ್ನ ಮೋಹದ ಗಿಣಿಯೆ ಗೋವಿಂದಬಾಯೆಂದು ಯಶೋದೆ ಕರೆದಳು ಬಿಗಿದಪ್ಪಿಬಾಯೆನ್ನ ಹಯವದನ ಗೋವಿಂದ7

***