Showing posts with label ಎಲ್ಯಾಡಿ ಬಂದ್ಯೋ ಮುದ್ದು ರಂಗಯ್ಯಾ ನೀ shreeda vittala. Show all posts
Showing posts with label ಎಲ್ಯಾಡಿ ಬಂದ್ಯೋ ಮುದ್ದು ರಂಗಯ್ಯಾ ನೀ shreeda vittala. Show all posts

Sunday, 1 August 2021

ಎಲ್ಯಾಡಿ ಬಂದ್ಯೋ ಮುದ್ದು ರಂಗಯ್ಯಾ ನೀ ankita shreeda vittala

 ..

kruti by Srida Vittala Dasaru  Karjagi Dasappa


ಎಲ್ಯಾಡಿ ಬಂದ್ಯೋ ಮುದ್ದು ರಂಗಯ್ಯಾ ನೀ - *

ನೆಲ್ಯಾಡಿ ಬಂದ್ಯೋ ಎನ್ನ ಕಣ್ಣ ಮುಂದಾಡದೆ ಪ


ಆಲಯದೊಳಗೆ ನೀನಾಡದೆ ಬೆಣ್ಣೆ

ಪಾಲು ಸಕ್ಕರೆಯನೊಲ್ಲದೆ ಚಿಕ್ಕ

ಬಾಲೇಯರೊಳು ನೀನಾಡದೆ

ಬಾಲಯ್ಯ ನೀಯೆನ್ನ ಕಣ್ಣ ಮುಂದಾಡದೆ 1


ಬಿಟ್ಟ ಮುತ್ತಿನ ಬೊಗಸೆ ಕಂಗಳು

ಫಣಿಯೊಳಿಟ್ಟ ಕಸ್ತೂರಿ ತಿಲಕ ಗಂಧವು

ದಿಟ್ಟತನದಿ ಬರುವ ಅಂದವು ಮುದ್ದು

ಕೃಷ್ಣ ನೀಯೆನ್ನ ಕಣ್ಣ ಮುಂದಾಡದೆ 2


ಅಷ್ಟದಿಕ್ಕಲಿ ಅರಸಿ ಕಾಣದೆ ಬಾಳ

ದೃಷ್ಟಿಗೆಟ್ಟೆನೊ ನಿನ್ನ ನೋಡದೆ -

ನ್ನೆಷ್ಟು ಪೇಳಲಿ ಹೇಳಬಾರದೆ ಶ್ರೀದ -

ವಿಠಲ ನೀಯೆನ್ನ ಕಣ್ಣ ಮುಂದಾಡದೆ 3

***