Showing posts with label ಎಲ್ಲಿಗ್ಹೋಗಿ ತಡಮಾಡಿದ್ಯೋ ಫುಲ್ಲಲೋಚನ ಕೃಷ್ಣ ನೀ ಎಲ್ಲಡಗಿದ್ಯೊ mahipati. Show all posts
Showing posts with label ಎಲ್ಲಿಗ್ಹೋಗಿ ತಡಮಾಡಿದ್ಯೋ ಫುಲ್ಲಲೋಚನ ಕೃಷ್ಣ ನೀ ಎಲ್ಲಡಗಿದ್ಯೊ mahipati. Show all posts

Wednesday, 1 September 2021

ಎಲ್ಲಿಗ್ಹೋಗಿ ತಡಮಾಡಿದ್ಯೋ ಫುಲ್ಲಲೋಚನ ಕೃಷ್ಣ ನೀ ಎಲ್ಲಡಗಿದ್ಯೊ ankita mahipati

ಎಲ್ಲಿಗ್ಹೋಗಿ ತಡಮಾಡಿದ್ಯೋ ಫುಲ್ಲಲೋಚನ ಕೃಷ್ಣ ನೀ ಎಲ್ಲಡಗಿದ್ಯೊ ಪ 


ಬಲ್ಲವರಿಗೆ ಬಲ್ಲತನದೋರ ಹೋಗಿದ್ಯೊ ಅಲ್ಲಿ ಅವರ ಸಹಕಾರ ನೀನಾದ್ಯೊ ಸುಲ್ಲಭವಾಗಿ ಜ್ಞಾನಕೆ ನೀ ಸಿಲುಕಿದ್ಯೋ ಒಲ್ಲದ್ಹಾಂಗ್ಹೋಗಿ ಎಲ್ಲರಿಗಾಗಿದ್ಯೊ 1 

ಙÁ್ಞನಿಗಳಿಗೆ ಙÁ್ಞನಸಮುದ್ರ ನಾಗಿದ್ಯೊ ಧ್ಯಾನಮಾಡುವರ ಧ್ಯಾನವೆ ಅಗಿದ್ಯೊ ಮುನಿಜನರೊಡನೆ ಮಾನಸ ಹಂಸನಾಗಿದ್ಯೊ ಖೂನದೋರಲು ಹೋಗಿ ನೀನೆ ಆಗಿದ್ಯೊ 2 

ಧೃಢಭಕ್ತರೊಡನೆ ಭಿಡಿಯೊಳಗಾಗಿದ್ಯೊ ಕಡಿಗಾಗದ್ಹಾಂಗ ಕೈಯೊಳಗಾಗಿದ್ಯೊ ಎಡಬಲಕವರೆಂದು ಬಿಡದ್ಹಾಂಗಾಗಿದ್ಯೊ ಒಡಲ ಹೊಕ್ಕವರ ಒಡಿಯನಾಗಿದ್ಯೊ 3 

ಪ್ರೇಮ ಉಳ್ಳವರ ಪ್ರೀತಿಯೊಳಗಾಗಿದ್ಯೊ ಸ್ವಾಮಿತನದಲಿ ಸಮೀಪನಾಗಿದ್ಯೊ ಕಾಮ ಪೂರಿಸಲಿಕೆ ನೇಮವ ಪಿಡಿದ್ಯೊ ಮಾಮನೋಹರ ನೀ ಸುಗಮವಾಗಿದ್ಯೊ 4 

ಇಂದು ನೆನಪಾಯಿತೆಂದು ಓಡಿ ನೀ ಬಂದ್ಯೊ ಚಂಚವಾಗೆನ್ನೊಳಗಾದ್ಯೊ ನೀ ಬಂದ್ಯೊ ಕಂದಮಹಿಪತಿಗನುಭವದೋರ ನೀ ಬಂದ್ಯೊ ತಂದೆ ಸದ್ಗುರು ಅನಂದವ ತಂದ್ಯೊ 5

***