Showing posts with label ಎಳ್ಳು ಕಾಳಿನಷ್ಟು ಭಕುತಿ ಎನ್ನೊಳಗಿಲ್ಲವಯ್ಯ purandara vittala. Show all posts
Showing posts with label ಎಳ್ಳು ಕಾಳಿನಷ್ಟು ಭಕುತಿ ಎನ್ನೊಳಗಿಲ್ಲವಯ್ಯ purandara vittala. Show all posts

Tuesday, 3 December 2019

ಎಳ್ಳು ಕಾಳಿನಷ್ಟು ಭಕುತಿ ಎನ್ನೊಳಗಿಲ್ಲವಯ್ಯ purandara vittala

ರಾಗ ತೋಡಿ. ರೂಪಕ ತಾಳ

ಎಳ್ಳುಕಾಳಿನಷ್ಟು ಭಕುತಿ ಎನ್ನೊಳಗಿಲ್ಲವಯ್ಯ
ಬೆಳ್ಳಕ್ಕಿಯಂತೆ ನಿನ್ನ ಧ್ಯಾನ ಮಾಡುವೆನಯ್ಯ ||ಪ||

ಗಂಡುಮುಳುಗ ಹಕ್ಕಿಯಂತೆ ನೀರ ಕಂಡ ಕಡೆಗೆ ಮುಳುಗಿ
ಮಂಡೆಶೂಲೆಯಲ್ಲದೆ ಗತಿಯು ಇಲ್ಲ
ಮಂಡೂಕನಂದದಿ ಕೆರೆಯ ದಂಡೆಯ ಮೇಲೆ ಕುಳಿತುಕೊಂಡು
ಮಂಡೇಮುಸುಕನಿಕ್ಕಿ ಮಂತ್ರ ಜಪಿಸುವೆನಯ್ಯ ||

ಗಾಣದೆತ್ತಿನಂತೆ ಕಣ್ಣ ಕಟ್ಟಿ ಪ್ರದಕ್ಷಿಣೆ ಮಾಡಿ
ಕಾಣದೆ ನಾ ತಿರುಗಿದೆ ಕಂಡುದುದಿಲ್ಲ
ಮಾಣಿಕ್ಯದ ರಾಶಿ ಅಡಿಗೆ ಕಂಗಳಯ್ಯನು ಪೋಗಿ
ಆಣಿಕಾರಿಕೆ ಮಾಡಿದಂಥ ಈ ಕುಯುಕುತಿ ||

ಇಕ್ಕಳವ ಕೈಯ ಪಿಡಿದುಕೊಂಡು ಕಾದ ಕಬ್ಬಿಣದಂತೆ
ಸಿಕ್ಕಿಸಿಕೊಂಡಲ್ಲದೆ ಗತಿಯು ಇಲ್ಲ
ಪೊಕ್ಕಳುಪೂವಿನ ಶ್ರೀ ಪುರಂದರವಿಠಲನೆ
ಮಕ್ಕಳಾಟಿಕೆಯ ಬಿಡೋ ರಕ್ಷಿಸೊ ಎನ್ನೊಡೆಯ ||
*******