Showing posts with label ಎಷ್ಟು ಪ್ರೇಮಿಯೋ ಗುರುವು ಎಷ್ಟು ಪ್ರೇಮಿಯೋ mahadevapuravasa. Show all posts
Showing posts with label ಎಷ್ಟು ಪ್ರೇಮಿಯೋ ಗುರುವು ಎಷ್ಟು ಪ್ರೇಮಿಯೋ mahadevapuravasa. Show all posts

Thursday 5 August 2021

ಎಷ್ಟು ಪ್ರೇಮಿಯೋ ಗುರುವು ಎಷ್ಟು ಪ್ರೇಮಿಯೋ ankita mahadevapuravasa

 ..

ಎಷ್ಟು ಪ್ರೇಮಿಯೋ ಗುರುವು ಎಷ್ಟು ಪ್ರೇಮಿಯೋ ಪ


ಎಷ್ಟು ಪ್ರೇಮಿ ಎನ್ನ ಬಿಡದೆ | ಸೃಷ್ಟಿಯಲ್ಲಿ ಕೈಯಪಿಡಿದ ಅ.ಪ


ಭಾನುಕೋಟಿ ತೇಜ ವರದ ಸಾನುರಾಗದಿಂದ ಕರೆದು

ಜ್ಞಾನ ಶಾಸ್ತ್ರ ಬೋಧಿಸುತ್ತ ಹೀನ ವೃತ್ತಿ ದೂರಿ ಪೊರೆದ 1

ನೀಲವರ್ಣ ಕಂಜನಯನ ನೀಲಕಂಠಮಿತ್ರ ಭಕ್ತ

ಪಾಲ ಭೂರಿದುಃಖಭವವ ಧೂಳಿಮಾಡಿ ಬಾಲಗೊಲಿದ 2

ಶ್ರೇಷ್ಠ ಸುಮಹದೇವಪುರದೊಳಿಷ್ಟರಂಗನಾಥ ಭರದಿ

ಮುಟ್ಟಿ ಮುಕ್ತಿಯಿತ್ತು ಪುನಃ ಹುಟ್ಟು ಸಾವುಗಳನು ಕಳದ 3

***