Showing posts with label ಏನ ಪೇಳಲಿ ತಂಗಿ ತಿಮ್ಮಯ್ಯನ ಏನು ಹೇಳಲಿ ತಂಗಿ purandara vittala ENA PELALI TANGI TIMMAYYANA. Show all posts
Showing posts with label ಏನ ಪೇಳಲಿ ತಂಗಿ ತಿಮ್ಮಯ್ಯನ ಏನು ಹೇಳಲಿ ತಂಗಿ purandara vittala ENA PELALI TANGI TIMMAYYANA. Show all posts

Wednesday, 29 December 2021

ಏನ ಪೇಳಲಿ ತಂಗಿ ತಿಮ್ಮಯ್ಯನ ಏನು ಹೇಳಲಿ ತಂಗಿ purandara vittala ENA PELALI TANGI TIMMAYYANA




chaitra suresh rao and gayathri tumkur venkatesh 2018


GAYATHRI TUMKUR VENKATESH 2012


ರಾಗ- ಮಧ್ಯಮಾವತಿ 
ಏನು ಹೇಳಲಿ ತಂಗಿ ತಿಮ್ಮಯ್ಯನಪಾದವನು ಕಂಡೆ
ಕನಸುಕಂಡೆನ ಮನದಲಿ ಕಳವಳಗೊ೦ಡೆನೆ||ಪ||

ಪೋನ್ನದ ಕಡಗನಿಟ್ಟು ತಿಮ್ಮಯ್ಯತಾ
ಪೋಲ್ವ ನಾಮವಇಟ್ಟು ಅ೦ದುಗೆಘಲುಗೆನ್ನುತ
ಎನ ಮುಂದೆ ಬಂದು ನಿಂತಿದ್ದನಲ್ಲೇ II೧II

ಮಕರಕು೦ಡಲವನಿಟ್ಟು ತಿಮ್ಮಯ್ಯ ತಾ
ಕಸ್ತೂರಿತಿಲಕವನಿಟ್ಟು ಗೆಜ್ಜೆ ಘಲುಗೆನುತ
ಸ್ವಾಮಿ ತಾ ಬಂದು ನಿಂತಿದ್ದನಲ್ಲೇ II೨II

ಮುತ್ತಿನ ಪಲ್ಲಕ್ಕಿ ಯತಿಗಳು
ಹೊತ್ತು ನಿಂತಿದ್ದರಲ್ಲೇ ಛತ್ರಚಾಮರದಿಂದ
ರಂಗಯ್ಯನ ಸೇವೆಯ ಮಾಡುವರೇ II೩ II

ತಾಮರ ಕಮಲದಲಿ ಕೃಷ್ಣಯ್ಯ ತಾ
ಬಂದು ನಿಂತಿದನಲ್ಲೇ ವಾಯು ಬೋಮ್ಮದಿಗಳು
ರಂಗಯ್ಯನ ಸೇವೆಯ ಮಾಡುವರೇ II೪II

ನವರತ್ನ ಕೆತ್ತಿಸಿದ ಸ್ವಾಮಿ ಎನ್ನ
ಹೃದಯಮ೦ಟಪದಲ್ಲಿ ಸವಾ೯ಭರಣ ದಿಂದ
ಪುರಂದರವಿಠಲನ ಕೂಡಿದೇನೆ II೫II
***


Kanasukandene manadalli kalavalagondene
Enu helali tangi timmayyana padavanu kande || pallavi ||

Ponnada kadaganittu timmayya ta
Polva namava ittu anduge Galugennuta
Ena munde bandu nintiddanalle || 1 ||

Makarakundalavanittu timmayya ta
Kasturi tilakavanittu gejje Galugenuta
Svami ta bandu nintiddanalle || 2 ||

Muttina pallakki yatigalu
Hottu nintiddaralle Catra camaradinda
Rangayyana utsava murutiya || 3 ||

Tamara kamaladali krushnayya ta
Bandu nintiddanalle vayu bommadigalu
Rangayyana seveya maduvare || 4 ||

Navaratna kettisida svami enna
Hrudayamantapadalli sarvabaranadinda
Purandaravithalana kudidene || 5 ||
***

pallavi

kanasu kaNDene manadalle kaLavaLa koNDene

anupallavi

Enu heLasi tangi timmayyana pAdavanu kaNDe

caraNam 1

ponnada kaDaganiTTu timmaya tA pOlva nAmava iTTU
anduge ghalukennuta ena munde bandu nindiddanalle

caraNam 2

makara kuNDalavaniTTu timmaya tA kastUri tilakaniTTu
gejje ghulukenuta svAmi tA bandu ninda nindiddanalle

caraNam 3

muttina pallakki yatigaLu hottu nindiddaralle
chatra cAmaradinda rangayya utsava mUrutiya

caraNam 4

tAmara kamaladali krSNayya tA bandu nindiddanalle
vAyu bommAdigaLu rangayyana sEveya mADuvare

caraNam 5

navaratna kettisida svAmi enna hrdaya maNTapadalli
sarvAbharaNadinda purandara viTTalana kUDidEne
***

ಕನಸುಕಂಡೆನೆ ಮನದಲ್ಲಿ ಕಳವಳಗೊಂಡೆನೆ
ಏನು ಹೇಳಲಿ ತಂಗಿ ತಿಮ್ಮಯ್ಯನ ಪಾದವನು ಕಂಡೆ || ಪಲ್ಲವಿ ||

ಪೊನ್ನದ ಕಡಗನಿಟ್ಟು ತಿಮ್ಮಯ್ಯ ತಾ
ಪೋಲ್ವ ನಾಮವ ಇಟ್ಟು ಅಂದುಗೆ ಘಲುಗೆನ್ನುತ
ಎನ ಮುಂದೆ ಬಂದು ನಿಂತಿದ್ದನಲ್ಲೆ || ೧ ||

ಮಕರಕುಂಡಲವನಿಟ್ಟು ತಿಮ್ಮಯ್ಯ ತಾ
ಕಸ್ತೂರಿ ತಿಲಕವನಿಟ್ಟು ಗೆಜ್ಜೆ ಘಲುಗೆನುತ
ಸ್ವಾಮಿ ತಾ ಬಂದು ನಿಂತಿದ್ದನಲ್ಲೆ || ೨ ||

ಮುತ್ತಿನ ಪಲ್ಲಕ್ಕಿ ಯತಿಗಳು
ಹೊತ್ತು ನಿಂತಿದ್ದರಲ್ಲೆ ಛತ್ರ ಚಾಮರದಿಂದ
ರಂಗಯ್ಯನ ಉತ್ಸವ ಮೂರುತಿಯ || ೩ ||

ತಾಮರ ಕಮಲದಲಿ ಕೃಷ್ಣಯ್ಯ ತಾ
ಬಂದು ನಿಂತಿದ್ದನಲ್ಲೆ ವಾಯು ಬೊಮ್ಮಾದಿಗಳು
ರಂಗಯ್ಯನ ಸೇವೆಯ ಮಾಡುವರೆ || ೪ ||

ನವರತ್ನ ಕೆತ್ತಿಸಿದ ಸ್ವಾಮಿ ಎನ್ನ
ಹೃದಯಮಂಟಪದಲ್ಲಿ ಸರ್ವಾಭರಣದಿಂದ

ಪುರಂದರವಿಠಲನ ಕೂಡಿದೇನೆ || ೫ ||
*******

ರಾಗ ದ್ವಿಜಾನಂತಿ/ಅಟ್ಟ ತಾಳ

ಕನಸುಕಂಡೆನೆ ಮನದಲ್ಲಿ ಕಳವಳಗೊಂಡೆನೆ
ಏನು ಹೇಳಲಿ ತಂಗಿ ತಿಮ್ಮಯ್ಯನ ಪಾದವನು ಕಂಡೆ || ಪಲ್ಲವಿ ||

ಪೊನ್ನದ ಕಡಗನಿಟ್ಟು ತಿಮ್ಮಯ್ಯ ತಾ
ಪೋಲ್ವ ನಾಮವ ಇಟ್ಟು ಅಂದುಗೆ ಘಲುಗೆನ್ನುತ
ಎನ ಮುಂದೆ ಬಂದು ನಿಂತಿದ್ದನಲ್ಲೆ || ೧ ||

ಮಕರಕುಂಡಲವನಿಟ್ಟು ತಿಮ್ಮಯ್ಯ ತಾ
ಕಸ್ತೂರಿ ತಿಲಕವನಿಟ್ಟು ಗೆಜ್ಜೆ ಘಲುಗೆನುತ
ಸ್ವಾಮಿ ತಾ ಬಂದು ನಿಂತಿದ್ದನಲ್ಲೆ || ೨ ||

ಮುತ್ತಿನ ಪಲ್ಲಕ್ಕಿ ಯತಿಗಳು
ಹೊತ್ತು ನಿಂತಿದ್ದರಲ್ಲೆ ಛತ್ರ ಚಾಮರದಿಂದ
ರಂಗಯ್ಯನ ಉತ್ಸವ ಮೂರುತಿಯ || ೩ ||

ತಾಮರ ಕಮಲದಲಿ ಕೃಷ್ಣಯ್ಯ ತಾ
ಬಂದು ನಿಂತಿದ್ದನಲ್ಲೆ ವಾಯು ಬೊಮ್ಮಾದಿಗಳು
ರಂಗಯ್ಯನ ಸೇವೆಯ ಮಾಡುವರೆ || ೪ ||

ನವರತ್ನ ಕೆತ್ತಿಸಿದ ಸ್ವಾಮಿ ಎನ್ನ
ಹೃದಯಮಂಟಪದಲ್ಲಿ ಸರ್ವಾಭರಣದಿಂದ
ಪುರಂದರವಿಠಲನ ಕೂಡಿದೇನೆ || ೫ ||

ಪೊನ್ನದ - ಹೊನ್ನಿನ, ಬಂಗಾರದ.
ಪೋಲ್ವ - ಪೊಳೆವ, ಹೊಳೆಯುವ.
ಬೊಮ್ಮಾದಿಗಳು - ಬ್ರಹ್ಮನೇ ಮೊದಲಾದ ದೇವತೆಗಳು.

[ಪುರಂದರ ಸಾಹಿತ್ಯ ದರ್ಶನ - ಭಾಗ ೧]

***********