Showing posts with label ಏನು ಕೊಟ್ಟನೆ ಮಗಳಾ ಉದಾ ಸೀನದಿ ಭಿಕ್ಷುಕ ಶಿವಗೀಂದು ಗಿರಿಜಾ gurumahipati. Show all posts
Showing posts with label ಏನು ಕೊಟ್ಟನೆ ಮಗಳಾ ಉದಾ ಸೀನದಿ ಭಿಕ್ಷುಕ ಶಿವಗೀಂದು ಗಿರಿಜಾ gurumahipati. Show all posts

Wednesday, 1 September 2021

ಏನು ಕೊಟ್ಟನೆ ಮಗಳಾ ಉದಾ ಸೀನದಿ ಭಿಕ್ಷುಕ ಶಿವಗೀಂದು ಗಿರಿಜಾ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ಏನು ಕೊಟ್ಟನೆ ಮಗಳಾ ಉದಾ | ಸೀನದಿ ಭಿಕ್ಷುಕ ಶಿವಗೀಂದು ಗಿರಿಜಾ ಪ 


ಹೆತ್ತವಳಿಲ್ಲಾ ಸೀ ಹುಟ್ಟತ ಪರದೇಶೀ | ನೆತ್ತಿಗೆ ಎಣ್ಣಿಲ್ಲಾ ನೆರೆಬಿಸಿ ನೀರಿಲ್ಲಾ | ದೊತ್ತಿದ ಕೂದಲು ದುರ್ಜಟಿ ಯಾಗಲು | ಹೊತ್ತಿದ ತಲೆಯಿಂದ ಹಣೆ ಉರಿಗಣ್ಣಾದ | ಇತ್ತಿ ಹೊದಿಯಲಿಲ್ಲಾದೀ ಭಸ್ಮ ಲೇಪನಾ | ಮೆತ್ತಿದ ಗುಣದಿಂದ ಮೈ ಯಲ್ಲ ಬೆಳ್ಚಾದಾ | ಎತ್ತ ನೇವುವನು ಭೂತ ಗಣಾ | ಯೋಗಿ - ಕು | ಲೋತ್ತ ಮನೆನಿಸಿದನು ಇಂಥ | ಹತ್ತು ಭುಜವ ತಾಳಿ ದೈದು ಮೊರೆಯುಗವ 1 

ಶರಥಿ ಮಥನದಲ್ಲಿ ಸಲೆ ವಿಷ ಹೊರಡಲಿ | ಸುರರ ಮಾತು ಕೇಳಿ ಶೀಘ್ರದಿ ಸುರಿಯಲಿ | ಉರಿಹೆಚ್ಚಿ- ಮೈಯ್ಯಲಿ ಉಬ್ಬಸ ಗೊಳುತಲಿ | ಸುರಗಂಗಿಯ ಹೊತ್ತ ಸೀತಾಂಶು ಕಳೆವತ್ತ | ಮರುಳವೆ ತಿರುಗುವ ಮತ್ತೆ ಭೋಳಾದೇವ | ತ್ವರಿತವ ಕೋಪದಯ ಮನಿಯೊಳು ಹಿಡಿದಿಹ | ಸುರರಿಗೆ ವಲಿದಿಹನು ಬೇಡಿದ | ವರಗಳನ್ನು ಕೊಡತಿಹನು ಬೆನ್ನಟ್ಟಿ | ಬರೆ ದುಷ್ಟ ಓಡಿದನು ಶ್ರೀ ವಿಷ್ಣು | ಕರುಣದಿ ಶರೆಯ ಬಿಡಿಸೆ ಕೊಂಡವನಿಗೆ 2 

ಕರಿಚರ್ಮ ತಾಳಿದಾ ಕಾಡೊಳು ಸೇರಿದಾ | ಉರಗ ಭೂಷಣನಿವ ಊಧ್ರ್ವರೇತಾದವ | ಹೊರೆ ಹುಲಿದೊಗಲಾ ಹಾಸಿಗೆ ಮಾಡಿದಾ | ಕೊರಳಳು ರುಂಡಮಾಲಾ ಕರದೊಳು ಕಪಾಲಾ | ಧರಿಸಿದ ನೀತನು ದೊರೆಯಲ್ಲದಾತನು | ನೆರೆದುಣ - ಲುಡಿಲಿಲ್ಲಾ ನರಸುರ ರೊಳಗಲ್ಲಾ | ಪರಕ ಪರೆನಿಸುವರು ಸ್ಮರಿಸಿದಾ ಆ ಗುರುವರ ಮಹಿಪತಿ ಪ್ರಭು ಸಾಂಬನೆಂಬವನಿಗೆ 3

***