ಏನು ಸೇವಿಸಿದೆ ಗುರು ಯೆಲೊ ಮಾರುತಿ |
ಭಾನು ವಂಶೋತ್ತಮನೆ ನಿರುತ ಧಾರ್ಮಿಕನೆಂದು ಪ
ಉದಧಿ |
ಭೀತಿ ಇಲ್ಲದೆ ಹಾರಿ ಲಂಕಾಪುರವ ದಹಿಸಿ |
ಸೀತೆ ವಾರ್ತೆಯ ತÀಂದು ಪೇಳಿದಕೆ ಸುಫಲಾ 1
ವನಧಿ ಭೂತಳವ ತಿರುಗಿ ಪ್ರತಾಪದಿಂದ |
ಗೋತುರೋನ್ನತ ತಂದು ತಡಿಯದೆ ಪ್ರಖ್ಯಾತದಿ |
ಸೇತುವಿಯ ಕಟ್ಟಿ ಕುಣಿದಾಡಿದದುಕೇನು ಫಲಾ 2
ಅಂದು ವಿಂಶತಿ ಹಸ್ತ ರಣದೊಳಗೆ ರಥವೇರಿ |
ಬಂದಿರಲು ನೋಡಿ ಈ ಧನುರ್ಧಾರಿಯಾ
ನಿಂದು ಚಾಲ್ವರಿದು ಬೊಬ್ಬಿರಿದದುಕ್ಕೇನು ಫಲಾ 3
ಒಂದೇ ಹಾರಿಕಿಯಲಿ ಜಿಗಿದು ಕುಪ್ಪಳಿಸಿ ನೀ |
ಗಂಧಮಾದನಗಿರಿಯ ಕಿತ್ತು ತಂದು |
ಅಂದದಲಿ ದೇವತತಿ ಕೊಂಡಾಡುತಿರೆ ಕಪಿ |
ವೃಂದವೆಬ್ಬಿಸಿ ಖಳರ ಮಡುಹಿದದುಕ್ಕೇನು ಫಲಾ 4
ಅಪರಿಮಿತ ಉಪಕಾರ ಮಾಡಿದಲ್ಲದೆ ನಿನ್ನ |
ಕೌಪೀನ ಬಿಡಿಸಲಿಲ್ಲಾ |
ವನಧಿ ನಿಜವೆಂದು ತುತಿಸಿದದುಕ್ಕೇನು ಫಲಾ 5
***********