ಏನುಂಟೇನಿಲ್ಲ ಗುರುಕೃಪೆಯಿಂದ ತನುಮನಿಟ್ಟದೇ ಪಡಕೊಂಬುದು ಚಂದ ಪ
ಸುಖ ಸುರುತದೆ ನೋಡಿ ಬಲುಬ್ರಹ್ಮಾನಂದ ಪ್ರಕಟಸಲಿಕ್ಕೆ ಬಾರದು ಮುಖದಿಂದ ಸಕಲವೆಲ್ಲಕೆ ಮೇಲು ತಿಳಿಯಬೇಕಿದೊಂದೆ ಶುಕಾದಿ ಮುನಿಗಳದಾರಿದರಿಂದೆ 1
ಸಿದ್ಧ ಬುದ್ಧ್ದರಿಗೆ ಸಾದ್ಯವದೆ ಸಿದ್ಧ ನೋಡಿ ಬುದ್ಧಿವಂತರಿಗೆ ಒಲಿದುಬಾಹುದು ಕೈಗೂಡಿ ಸನ್ಮಾರ್ಗ ಸುಪಥವಿದೆ ಸದ್ಗುರು ಸೇವೆಮಾಡಿ ಸದ್ಭ್ಬಾವದಿಂದಲಿ ಸ್ವಸುಖವೆ ಸೂರ್ಯಾಡಿ 2
ಭಾಸ್ಕರ ಗುರುದಯದವಗಿನ್ನೇನು ಭಾಸುತೀಹ್ಯದಾವಗಿನ್ನು ನಿಜಕಾಮಧೇನು ವಿಶ್ವದೊಳಗವನೊಬ್ಬ ಸಿದ್ಧತಾನು ದಾಸಮಹಿಪತಿಗಿದೇ ಅಭಿನವಧೇನು 3
***