Showing posts with label ಏನೆಂದರಿಬೇಕೀ ಆಟಾ ಘನಗುರು ಮಾಡಿದ ಮಾಟ ಅನುಮಾನಳಿಸಿದ mahipati. Show all posts
Showing posts with label ಏನೆಂದರಿಬೇಕೀ ಆಟಾ ಘನಗುರು ಮಾಡಿದ ಮಾಟ ಅನುಮಾನಳಿಸಿದ mahipati. Show all posts

Wednesday, 1 September 2021

ಏನೆಂದರಿಬೇಕೀ ಆಟಾ ಘನಗುರು ಮಾಡಿದ ಮಾಟ ಅನುಮಾನಳಿಸಿದ ankita mahipati

ಏನೆಂದರಿಬೇಕೀ ಆಟಾ ಘನಗುರು ಮಾಡಿದ ಮಾಟ ಅನುಮಾನಳಿಸಿದ ನೋಟ ಅನುಭವಕಾಯಿತು ನೀಟ ಪ 


ರಂಜಕ ಬಲುಕೊಂಡಿತು ನೋಡಿ ಅಂಜಿಕಿ ಭವಭಯ ಈಡ್ಯಾಡಿ ಪ್ರಾಂಜಲ ಸದ್ಗುರು ದಯಮಾಡಿ ಅಂಜನ ಹಚ್ಚಿದ ದುವುಡಿ 1 

ಕಾಣದ ಕಂಡೆವು ಕಣ್ಣಿಲಿ ಖೂನಕ ಬಾರದು ಘನಲೀಲೆ ಜಾಣರು ಬಲ್ಲರು ಮನದಲಿ ನೆನದರು ತಾಂ ವರಿಕಿಲೆ 2 

ಆಶ್ವರ್ಯವು ತಾನಾಗ್ಯದೆ ನಿಶ್ಚಯದೋರುತಲ್ಯದೆ ಪಶ್ಚಿಮಕೆ ಭಾಸುತದೆ ಸ್ವಚ್ಛವು ನೋಡಿದರದೆ 3 

ರಚ್ಚಿಗೆ ತಾಂ ಬಾಹುದೆಲ್ಲ ಮುಚ್ಚಿಟ್ಟಡೆÉ ಬಾಳು ಸವಿಬೆಲ್ಲ ಅಚ್ಚಳಿಯದ ಭಕ್ತನೆ ಬಲ್ಲ ನೆಚ್ಚಿದ ಮಹಿಪತಿ ಸೊಲ್ಲ4

***