ಕಾಖಂಡಕಿ ಶ್ರೀ ಕೃಷ್ಣದಾಸರು
ಏನೆಂದ್ಹೇಳಲಿರಂಗನಟ್ಟುಳಿ ಮಾನವರಂತಿವನಲ್ಲಾ ತಾನಾರಿಗೆ ತನ್ನೆಲೆಗುಡ ಗೋಪೀ ಮಾನಿನಿಮಗ ಬಲುಹೊಲ್ಲಾ ಪ
ಕೆಳಗಿಲ್ಲದಲಿರೆ ಗೋರಸ ಭ್ಯಾಂಡ್ಯವು | ನೆಲವಿನ ಅಡಕಲ ನೋಡಿ ಅದು | ನಿಲಕದಲಿರೆ ಕೈಗೂಡಿ ಕಡ | ಗೋಲಿಲಿ ಯಜ್ಞ ಮಾಡೀ | ಗೆಳೆಯರ್ವೆರ ಸೈದ ಬಲುಸೂರ್ಯಾಡಿ | ಸಿಲುಕದ ಲ್ಹೋಗುವ ಪೋಡಿ | 1
ಇಕ್ಕಿದ ಕದಗಳು ಇಕ್ಕಿರಬೇಕು | ಫಕ್ಕನೆ ಮನೆಯೊಳು ಸುಳಿದು | ಚಿತ್ತಕ ಮೋಹಿನಿಂದು ಅವ | ರಕ್ಕರದಲಿ ನೆರೆದು ಚಿಕ್ಕ ಬಾರಕೆ | ಠಕ್ಕಿಸಿ ಹೊರುವ ಆ ಮಕ್ಕಳಾಟಿಕೇನಿದು2
ಖೂನಕೆ ಬಾರದೆ ತಾನಲ್ಲಿದಲಿಹ | ನಾನಾ ವೃತ್ತಿಗೆ ಬಂದು ಇದು | ಧೇನಿಸಿ ನೆಲೆ ತಿಳಿಯದ | ನಾನಾ ನೆಂಬವರಿಗೆ ಇದು | ಶ್ರೀನಿಧಿ ಗುರುಮಹಿಪತಿ ಪ್ರಭುವಿನ | ಅನುಮಾನದಲೇ ದೂರುವುದು3
***