Showing posts with label ಏನೆಂದ್ಹೇಳಲಿ ಸ್ವಾನುಭವದ ಸುಭೋಗ mahipati. Show all posts
Showing posts with label ಏನೆಂದ್ಹೇಳಲಿ ಸ್ವಾನುಭವದ ಸುಭೋಗ mahipati. Show all posts

Wednesday, 1 September 2021

ಏನೆಂದ್ಹೇಳಲಿ ಸ್ವಾನುಭವದ ಸುಭೋಗ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಏನೆಂದ್ಹೇಳಲಿ ಸ್ವಾನುಭವದ ಸುಭೋಗ p 


ಸುಖಗರುತದ ಶಿಖಾಮಧ್ಯ ಸಂತ್ರಾಧಾರಿ ಬೇಕಾದರೆ ನೋಡಿ ಷಕಚಕ್ರವೇರಿ ಏಕೋಮಯವಾಗ್ಯದ ವಸ್ತು ಒಂದೇ ಸರಿ ಲೋಕಪಾಲಕಸ್ವಾಮಿ ತಾ ಸಹಕಾರಿ 1 

ಜುಮ್ಮು ಜುಮ್ಮುಗುಡುತದೆ ರೋಮಾಂಚಗಳು ಧಿಮಿ ಧಿಮಿಗುಡುತದೆ ನಾದಧ್ವನಿಗಳು ಕ್ರಮ ತಿಳಿದರೆ ಭಾಸುತದೆ ಸುಳಹುಗಳು ಸಂಭ್ರಮವಾದರು ಅನುಭವಿಗಳು 2 

ಕಳೆ ಮಳೆಮಿಂಚು ತುಂಬೇದ ಬಲು ಬಹಳ ಹೊಳೆಯುತಲ್ಯದೆ ಸ್ವಸುಖದ ಕಲ್ಲೋಳ ಝಳಝಳಿಸುತ ಜ್ಯೋತಿರ್ಮಯ ಥಳಥಳ ತಿಳಕೊ ಮಹಿಪತಿ ಗುರುದಯದ ಸುಫಳ 3

***