Showing posts with label ಏಳು ಗೋಪಾಲ ಬಾಲ ಇನ್ನೂ ಭಾಳ ಹೊತ್ತಾಯಿತು ಭಕ್ತ ಪರಿಪಾಲ gopalakrishna vittala. Show all posts
Showing posts with label ಏಳು ಗೋಪಾಲ ಬಾಲ ಇನ್ನೂ ಭಾಳ ಹೊತ್ತಾಯಿತು ಭಕ್ತ ಪರಿಪಾಲ gopalakrishna vittala. Show all posts

Sunday, 1 August 2021

ಏಳು ಗೋಪಾಲ ಬಾಲ ಇನ್ನೂ ಭಾಳ ಹೊತ್ತಾಯಿತು ಭಕ್ತ ಪರಿಪಾಲ ankita gopalakrishna vittala

ಏಳು ಗೋಪಾಲ ಬಾಲ ಇನ್ನೂ

ಭಾಳ ಹೊತ್ತಾಯಿತು ಭಕ್ತ ಪರಿಪಾಲ ಪ.


ಮುನಿಜನರೆದ್ದು ಪೂಜಿಸೆ ನಿನ್ನ ನಿಂತಿರೆ

ಮನುಜರೆಲ್ಲರೂ ಕಾದಿಹರು ದರುಶನಕೆ

ಸನಕಾದಿ ವಂದಿತ ಸರ್ವೇಶನೆಂತೆಂದು

ವಿನಯದಿಂದಲಿ ನುತಿಪರು ಭಾಗವತರು 1

ತಾರೆಗಳಡಗಿತು ಕಮಲಗಳರಳಿತು

ಪೂರ್ವ ದಿಕ್ಕಿನಲಿ ತೋರುವ ರವಿ ಉದಯ

ಭೇರಿ ತುತ್ತೂರಿ ನಗಾರಿ ಬಾರಿಸುತಿದೆ

ಸಾರಿ ಕೂಗುತಲಿದೆ ಕೋಳಿ ವೃಂದಗಳು 2

ಬಾಲಲೀಲೆಗಳಿಂದ ಗೋವಳರೊಡನಾಡಿ

ಭಾಳ ಆಯಾಸವಾಗಿಹುದೆ ಕಂದಯ್ಯ

ಬಾಲೆ ಗೋಪ್ಯಮ್ಮ ನಿನ್ನ ಲಾಲಿಸಲಿಲ್ಲವೆ

ಬಾಲಯತಿಗಳು ಪೂಜಿಸುವರೇಳಯ್ಯ 3

ಬಿಸಿಬಿಸಿ ನೀರು ಪಂಚಾಮೃತವೆರೆಯುತ

ಹಸನಾದ ಪಾಲು ಸಕ್ಕರೆ ಉಂಡೆಗಳು

ಹಸುಗೂಸು ನಿನಗೆ ಹುಗ್ಗಿಯು ದೋಸೆ ಪೊಂಗಲು

ಬಿಸಜಾಕ್ಷ ಯತಿಗಳರ್ಪಿಸುವರೇಳಯ್ಯ 4

ನುತಿ ಕೇಳಲಿಲ್ಲ ಆ ದಣಿದೆಂದು ಮಲಗಿದ್ಯಾ

ಶ್ರುತಿ ವೇದತತಿಗಿಂತ ಚತುರ ಮಾತಿನೊಳು

ಹಿತದಿ ಯಶೋದೆ ಎಬ್ಬಿಸಲೆಂದು ಮಲಗಿದ್ಯಾ

ಚ್ಯುತದೂರ ಗೋಪಾಲಕೃಷ್ಣವಿಠ್ಠಲಯ್ಯ 5

****