..
Kruti by ವಿಜಯರಾಮಚಂದ್ರ ವಿಠಲ ದಾಸರು mysore kattemane
ಓಂಕಾರ ಪ್ರತಿಪಾದ್ಯ ಶಂಖಚಕ್ರಾಭಯಕರ
ಬಿಂಕದಿಂದ ಬಾಕು ಟೊಂಕದಿ ಕಟ್ಟಿ ಮೆರೆವ ದೇವ 1
ಇಷ್ಟು ಜನರ ರೋಗ ತೊಟ್ಟಿ ತೀರ್ಥದಿಂದ ಕಳೆವ
ಕಷ್ಟದ ಕಂಕಣ ಕಟ್ಟಿ ಮೆರೆವ ದೇವಾ 2
ದೇಶದೇಶದಿ ಬರುವ ದಾಸ ಜನರ ಅರ್ಥಿ
ಕಾಸುವೀಸಕೆ ಕೊಟ್ಟು ಲೇಸಾಗಿರುವಿಯಿಲ್ಲಿ 3
ನಾಮ ತೀರ್ಥ ಪ್ರಸಾದ ಕಾಮಿಸೆ ವಿಕ್ರಯಿಸುವ
ನೇಮಗಳನೆ ಕೊಟ್ಟು ತ್ರಿಧಾಮ ನಿಲಯನೆ 4
ಮಂಗಳ ಮಹಿಮನೆ ಗಂಗಾಜನಕನೆ
ಅಂಗಜನಯ್ಯನೆ ವೆಂಕಟರಮಣನೆ 5
ತಾಳ ತಂಬೂರಿ ದಮ್ಮಡಿ ಮೇಳದೊಳು ದಾಸರು
ವೇಳೆ ವೇಳೆಗೆ ಸೇವಿಸೆ ಕಾಳ ದೋಷವ ಕಳೆವ 6
ರಮಾ ಸೇವಿತÀ ವಿಜಯ ರಾಮಚಂದ್ರವಿಠಲ
ನೇಮದಿಂದಲಿ ನಿತ್ಯ ನಿನ್ನ ನಾಮಗಳನೆ ನುಡಿಸೊ 7
***