Showing posts with label ಕಂಡೆ ಕನಸಿನಲಿ ನಾ ಪಾಂಡುರಂಗನ gopalakrishna vittala. Show all posts
Showing posts with label ಕಂಡೆ ಕನಸಿನಲಿ ನಾ ಪಾಂಡುರಂಗನ gopalakrishna vittala. Show all posts

Sunday, 1 August 2021

ಕಂಡೆ ಕನಸಿನಲಿ ನಾ ಪಾಂಡುರಂಗನ ankita gopalakrishna vittala

ಕಂಡೆ ಕನಸಿನಲಿ ನಾ ಪಾಂಡುರಂಗನ

ಮಂಡೆ ಇಡುತಲಿ ಪುಂಡಲೀಕ ಚರಣದಲೀ ಪ.


ಪಂಡರೀಕ್ಷೇತ್ರದಲಿ ವಿಠ್ಠಲನ ದರ್ಶನಕೆ

ದಂಡೆ ಹಾರ ಕೊಂಡು ಪೋಗುತಿರಲೂ

ಹಿಂಡು ಜನ ಊಟಕೆಡೆ ಅಣಿಮಾಡುತಿರಲಲ್ಲಿ

ಕಂಡು ಸಾಗುತ ಮುಂದೆ ದ್ವಾರದೆಡೆ ಬಂದು 1

ನಂತರದಿ ದ್ವಾರಗಳು ಮುಚ್ಚಿರಲು ಕಂಡು ಬಹು

ಚಿಂತಿಸಲು ಅಲ್ಲೊಬ್ಬ ಬರಲು ಅವಗೇ

ಅಂತರಂಗವನುಸುರೆ ಕದ ತೆರೆದು ನೋಡೆನಲು

ಸಂತೋಷದಿಂದೆರಡು ದ್ವಾರಗಳ ತೆರೆದೇ 2

ರತಿಪತಿಯ ಬಿಂಬ ಶ್ರೀ ಪ್ರದ್ಯುಮ್ನವಿಠ್ಠಲನ

ಮೂರ್ತಿಯನೆ ಕಂಡು ಹಾರವನ್ಹಾಕಿ ನಮಿಸಿ

ಅತಿ ಪ್ರೀತಿ ಭಕ್ತಿಯಲಿ ಅಪ್ಪಿ ನಾ ಮೈ ಮರತೆ

ಸ್ತುತಿಸುತಲಿ ಗೋಪಾಲಕೃಷ್ಣವಿಠ್ಠಲನನಾ 3

****