Showing posts with label ಕಂಡೆವಯ್ಯ ನಿಮ್ಮ ಗುರುಪುಣ್ಯ ಚರಣಮಹಿಮೆ ಮಂಡಲದೊಳು mahipati. Show all posts
Showing posts with label ಕಂಡೆವಯ್ಯ ನಿಮ್ಮ ಗುರುಪುಣ್ಯ ಚರಣಮಹಿಮೆ ಮಂಡಲದೊಳು mahipati. Show all posts

Wednesday, 1 September 2021

ಕಂಡೆವಯ್ಯ ನಿಮ್ಮ ಗುರುಪುಣ್ಯ ಚರಣಮಹಿಮೆ ಮಂಡಲದೊಳು ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಕಂಡೆವಯ್ಯ ನಿಮ್ಮ ಗುರುಪುಣ್ಯ ಚರಣಮಹಿಮೆ ಮಂಡಲದೊಳು ಗುರುಕೃಪೆಯಿಂದ ಪ 


ಕಣ್ಣಮುಚ್ಚಿದರೆ ತಾ ಕಣ್ಣನೊಳಗದೆ ಕಣ್ದೆರದರೆ ಕಾಣಿಸುತದೆ ಸಣ್ಣ ದೊಡ್ಡದರೊಳು ತುಂಬಿತುಳುಕುತದೆ ಬಣ್ಣ ಬಣ್ಣದಲೆ ಭಾಸುತಲ್ಯದೆ 1 

ಆಲಿಸಿಕೇಳಲು ಹೇಳಗುಡುತಲ್ಯದೆ ತಾಳಮೃದಂಗ ಭೇರಿ ಭೋರಿಡುತ ಒಳಹೊರಗೆ ಧಿಮಿಧಿಮಿಗೊಡುತಲ್ಯದೆ ಹೇಳಲಿನ್ನೇನು ಕೌತುಕವ 2 

ಸುಳಿ ಸುಳಿದಾಡುತಹೊಳೆಯುತ ಎನ್ನೊಳಗೆ ಥಳಥಳಿಸುವ ತೇಜ:ಪುಂಜವಿದು ಪರಿ ಕಳೆದೋರುತಲ್ಯದೆ ಝಳಝಳಿಸುತ ಎನ್ನ ಮನದೊಳಗೆ 3 

ತುತ್ತಾಯಿತಾ ಮಾಡಿನಿತ್ಯ ಸಲುಹುತದೆ ಎತ್ತಹೋದರೆ ತನ್ನಹತ್ತಿಲ್ಯದೆ ದತ್ತವುಳ್ಳವಗೆ ತಾ ಪ್ರತ್ಯಕ್ಷವಾಗ್ಯದೆ ಮೊತ್ತವಾಗ್ಯದೆ ತನ್ನ ನೆತ್ತಿಯೊಳಗೆ 4 

ಧನ್ಯಗೈಸಿತು ಎನ್ನ ಪ್ರಾಣ ಜೀವನವಿದು ಚೆನ್ನಾಗಿ ಪೂರ್ಣ ಗುರುಕೃಪೆಯಿಂದ ಕಣ್ಣಾರೆ ಕಂಡೆ ಭಾನು ಕೋಟಿಪ್ರಕಾಶ ನಿಮ್ಮ ಧನ್ಯಧನ್ಯವಾದ ಮಹಿಪತಿಯು 5

****