Showing posts with label ಕಣಿಯ ಹೇಳಲು ಬಂದೆ ನಾರಾಯಣನಲ್ಲದೆ ಇಲ್ಲವೆಂದು neleyadikeshava. Show all posts
Showing posts with label ಕಣಿಯ ಹೇಳಲು ಬಂದೆ ನಾರಾಯಣನಲ್ಲದೆ ಇಲ್ಲವೆಂದು neleyadikeshava. Show all posts

Wednesday, 1 September 2021

ಕಣಿಯ ಹೇಳಲು ಬಂದೆ ನಾರಾಯಣನಲ್ಲದೆ ಇಲ್ಲವೆಂದು ankita neleyadikeshava

 ..

ಕಣಿಯ ಹೇಳಲು ಬಂದೆ ನಾರಾಯಣನಲ್ಲದೆ ಇಲ್ಲವೆಂದು - ಮಿಕ್ಕಬಣಗು ದೈವದ ಗೊಡವೆ ಬೇಡ ನರಕ ತಪ್ಪದು ಪ


ಎಕ್ಕನಾತಿಯರು ಕಾಟಿ ಜಕ್ಕಿ ಜಲಕನ್ಯೆಯರುಸೊಕ್ಕಿನಿಂದ ಸೊಂಟಮುರುಕ ಬೈರೇ ದೇವರುಮಿಕ್ಕ ಮಾರಿ ಮಸಣಿ ಚೌಡಿ ಮೈಲಾರಿ ಮೊದಲಾದಠಕ್ಕು ದೈವದ ಗೊಡವೆ ಬೇಡ ನರಕ ತಪ್ಪದು 1


ಸುತ್ತಣವರ ಮಾತ ಕೇಳಿ ಗುತ್ತಿಯ ಎಲ್ಲಮ್ಮಗೊಲಿದುಬತ್ತಲೆಯೆ ದೇವರೆದುರು ಬರುವುದು ನೋಡಿರೊಮತ್ತೆ ಬೇವಿನುಡುಗೆಯ ಅರ್ತಿಯಿಂದುಟುಗೊಂಡುಮುಕ್ತಿ ಕಾಂಬೆವೆಂಬ ಮೌಢ್ಯ ಬೇಡಿರÉೂ 2


ತೂಳದವರ ಮಾತ ಕೇಳಿ ಖೂಳರೆಲ್ಲ ಕೂಡಿಕೊಂಡುಹಾಳು ಮಾಡಿ ಕೈಯಲಿದ್ದ ಹೊನ್ನು ಹಣಗಳಬಾಳುತಿಪ್ಪ ಕೋಣ ಕುರಿಯ ಏಳಬೀಳ ಕೊರಳ ಕೊಯ್ದುಬೀಳ ಬೇಡಿ ನರಕಕೆಂದು ಹೇಳ ಬಂದೆನೊ3


ಹೊಳ್ಳದ ಬಿಚ್ಚೇರು ಸಹಿತ ಸುಳ್ಳರೆಲ್ಲ ಕೂಡಿಕೊಂಡುಬೆಳ್ಳನ ಬೆಳತನಕ ನೀರ ತಡಿಯಲಿ ಕುಳಿತುಗುಳ್ಳೆ ಗೊರಜೆ ಕೂಡಿ ತಿಂದು ಕಳ್ಳು ಕೊಡನ ಬರಿದು ಮಾಡುವಂಥಪೊಳ್ಳು ದೈವದ ಗೊಡವೆ ಬೇಡ ನರಕ ತಪ್ಪದು4


ಪೊಡವಿಗಧಿಕ ವಿಜಯನಗರದೊಡೆಯ ಕಟ್ಟೆ ವೆಂಕಟೇಶಕಡು ಚೆಲ್ವ ಕಟ್ಟಾಣಿ ಕನಕನೊಡೆಯಬಡದಾದಿ ಕೇಶವನ ಪಾದ ಬಿಡದೆ ಭಜಿಸಿರೊಜಡದೈವಗಳ ಇಂಥ ಪೂಜೆ ಬೇಡ ಕಾಣಿರೋ 5

***