ಕಣ್ಣ ಹಬ್ಬವಾಯಿತು ಎನಗಿಂದು ಧನ್ಯಧನ್ಯಗೈಸಿದ ದೀನಬಂಧು ಪ
ತುಂಬಿತುಳುಕುತಲ್ಯದ ಬ್ರಹ್ಮಾನಂದ ಹಂಬಲಿಟ್ಟು ನೋಡನುಭವದಿಂದ ಗುಂಭಗುರತವಾಗದೇ ನಿಜಾನಂದ ನಂಬಿ ನಡಿಯಲಿಕ್ಕಿದೆ ಬಲು ಚಂದ 1
ಕಣ್ಣು ಮುಟ್ಟಿನೋಡಲು ಖೂನಗೊಟ್ಟು ಪುಣ್ಯ ಹೊಳೆಯುತಲ್ಯದೆ ಎದುರಿಟ್ಟು ಎನ್ನ ಮ್ಯಾಲೆ ಸದ್ಗುರು ದಯವಿಟ್ಟು ಚಿನ್ನುಮಯದೋರಿದ ನಿಜಗುಟ್ಟು 2
ಹೇಳಲಿನ್ನೇನದನುಭವಸುಖಾ ಥಳಥಳಗುಡುತದೆ ಕೌತುಕಾ ಕೇಳಿಕೋ ಬೇಕಿದುವೆ ಗುರುಮುಖಾ ಹೇಳಿಕುಡುವ ಮಹಿಪತಿಗುರು ಥೋಕಾ 3
***