Showing posts with label ಕರಕಮಲ ತಡೆಯುವುದೆ ಕಟುಖಾರವಾ gopalakrishna vittala. Show all posts
Showing posts with label ಕರಕಮಲ ತಡೆಯುವುದೆ ಕಟುಖಾರವಾ gopalakrishna vittala. Show all posts

Sunday, 1 August 2021

ಕರಕಮಲ ತಡೆಯುವುದೆ ಕಟುಖಾರವಾ ankita gopalakrishna vittala

ಕರಕಮಲ ತಡೆಯುವುದೆ ಕಟುಖಾರವಾ

ನರಹರಿಯ ನಿತ್ಯ ಪೂಜಿಸುವ ಕೋಮಲದಾ ಪ.


ಪರಿವಾರ ಜನವು ಭೋಜನಕೆ ಕುಳಿತಿರಲು ನರ

ಹರಿಗೆ ಅರ್ಪಿತದ ಹುಳಿಯಲ್ಲಿ ಕರವಿಟ್ಟು

ಪರಿಪಕ್ವ ಶಾಖದ ಹೋಳುಗಳ ಬಡಿಸಲು

ಉರಿ ಉರಿ ಎಂಬ ತೆರದಿ ಮನ ಕರ ಕರೆಗೆ ಸಿಲುಕೇ 1

ಮಧ್ವದುಗ್ಧಾಭ್ಧಿಯಲಿ ಜನಿಸಿದ ಸುಧಾರಸವ

ಶುದ್ಧ ದೃಷ್ಟಿಯಲ್ಲೀ ಸವಿಸವಿದು ಮಧುರಾ

ಹೃದ್ವಜದಲಿ ತುಂಬಲನುವಾದ ಪುಸ್ತಕವ

ಮುದ್ದಾಗಿ ಪಿಡಿಯಲನುಕೂಲವಾಗಿ ಇಂಥ 2

ಗಂಧ ಕುಸುಮಾಕ್ಷತೆಗಳಿಂದ ಶ್ರೀ ತುಳಸಿದಳ

ದಿಂದ ವಿಠ್ಠಲ ಕೃಷ್ಣ ಲಕ್ಷ್ಮಿನರಹರಿಯಾ

ವೃಂದ ಸಾಲಿಗ್ರಾಮ ಹನುಮ ಯತಿಕುಲಜರುಗ

ಳಿಂದ ಸಹಿತದಿ ಪೂಜೆ ವಿಭವದಲಿ ಗೈದಾ 3

ಮಧುರಾನ್ನ ಸವಿದು ಮಧುಸೂದನನ ಗುಣಗಳನು

ವಿಧವಿಧದಿ ಮಧ್ವಗ್ರಂಥದಿ ಕಂಡು ನಲಿದೂ

ಹೃದಯ ನಿರ್ಮಲದಿ ಆಲಿಸುವ ಭಕ್ತರಿಗೆ

ಮಧುರ ರಸಮನದ ಎಡೆಯಲ್ಲಿ ಬಿಡಿಸುವ ಇಂಥ 4

ಗೋಪಾಲಕೃಷ್ಣವಿಠ್ಠಲನ ಭಕ್ತರು ಬಂದು

ಶ್ರೀಪಾದಕೆರಗೆ ಸಿರದಲ್ಲಿ ಅಕ್ಷತೆಯಾ

ಅಪಾರ ಕರುಣದಿಂದಲಿ ಸೂಸಿ ನಲಿಯುತಲಿ

ಅಪತ್ತು ಕಳೆವ ಶ್ರೀ ಪ್ರದ್ನುಮ್ನತೀರ್ಥಯತಿ 5

****